ಭಾನುವಾರ, ಜೂಲೈ 5, 2020
23 °C

ಫ್ಯಾಕ್ಟ್‌ ಚೆಕ್‌: ಸ್ಯಾನಿಟೈಸರ್‌ನಿಂದ ಚರ್ಮದ ಕಾಯಿಲೆ ಬರುವ ಸಾಧ್ಯತೆ ಇದೆಯೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಸತತವಾಗಿ 50ರಿಂದ 60 ದಿನಗಳ ಕಾಲ ಹ್ಯಾಂಡ್ ಸ್ಯಾನಿಟೈಸರ್ ಬಳಸುವುದರಿಂದ ಚರ್ಮದ ಕಾಯಿಲೆ ಹಾಗೂ ಕ್ಯಾನ್ಸರ್ ಬರುವ ಸಾಧ್ಯತೆಯಿರುತ್ತದೆ’– ಕೋವಿಡ್‌ನಿಂದ ರಕ್ಷಣೆ ಪಡೆಯಲು ಸ್ಯಾನಿಟೈಸರ್ ಅತಿಹೆಚ್ಚು ಬಳಕೆಯಾಗುತ್ತಿರುವ ಸಮಯದಲ್ಲಿ  ಇಂತಹ ಮಾಹಿತಿ ಇರುವ ಲೇಖನ ಹಿಂದಿ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅದರ ಪಿಡಿಎಫ್ ಶೇರ್ ಆಗುತ್ತಿದೆ. 

ಇದೊಂದು ಸುಳ್ಳು ಮಾಹಿತಿ. ಸ್ಯಾನಿಟೈಸರ್ ಬಳಕೆ ಮನುಷ್ಯನಿಗೆ ಹಾನಿ ಮಾಡುವುದಿಲ್ಲ. ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಶೇ 70ರಷ್ಟು ಆಲ್ಕೊಹಾಲ್ ಅಂಶ ಹೊಂದಿರುವ ಸ್ಯಾನಿಟೈಸರ್ ಬಳಕೆಯನ್ನು ಶಿಫಾರಸು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ಸ್ಪಷ್ಟನೆ ನೀಡಿದೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು