ಶುಕ್ರವಾರ, ಜುಲೈ 30, 2021
24 °C

Fact check: ಹೊಸ ಸಂಸತ್ ಭವನ ನಿರ್ಮಾಣಕ್ಕೆ 2012ರಲ್ಲಿ ಒಪ್ಪಿಗೆ ಸೂಚಿಸಲಾಗಿತ್ತಾ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

'ನೂತನ ಸಂಸತ್ ಕಟ್ಟಡವನ್ನು ನಿರ್ಮಾಣ ಮಾಡಲು 2012ರಲ್ಲಿ ಅಂದಿನ ಲೋಕಸಭೆ ಸ್ಪೀಕರ್ ಆಗಿದ್ದ ಕಾಂಗ್ರೆಸ್‌ನ ಮೀರಾ ಕುಮಾರ್ ಅವರು ಒಪ್ಪಿಗೆ ಸೂಚಿಸಿದ್ದರು. 35,000 ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು 3,000 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಯುಪಿಎ-2 ಸರ್ಕಾರ ಅನುಮತಿ ಪಡೆದುಕೊಂಡಿತ್ತು. ಆದರೆ 65,000 ಚದರ ಅಡಿ ವಿಸ್ತೀರ್ಣದ ನೂತನ ಸಂಸತ್ ಕಟ್ಟಡವನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇವಲ 971 ಕೋಟಿಯಲ್ಲಿ ನಿರ್ಮಾಣ ಮಾಡಲಿದೆ' ಎಂಬ ವಿವರ ಇರುವ ಪೋಸ್ಟ್‌ಗಳು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ.

'ಈಗಿನ ಸಂಸತ್ ಭವನ ಹಳೆಯದಾಗಿದೆ. ಹೊಸ ಸಂಸತ್ ಭವನ ನಿರ್ಮಾಣ ಮಾಡಬಹುದು ಎಂದು 2012ರಲ್ಲಿ ಅಂದಿನ ಲೋಕಸಭೆ ಸ್ಪೀಕರ್ ಮೀರಾ ಕುಮಾರ್ ಅವರು ಹೇಳಿದ್ದರು. ಆದರೆ ಈ ಯೋಜನೆ ಕಾರ್ಯರೂಪಕ್ಕೆ ಬಂದಿರಲಿಲ್ಲ. 2015ರಲ್ಲಿ ಅಮದಿನ ಸ್ಪೀಕರ್ ಸುಮಿತ್ರಾ ಮಹಾಜನ್ ಸಹ ಇಂತಹದ್ದೇ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದ್ದರು. ಮೀರಾ ಕುಮಾರ್ ಮತ್ತು ಸುಮಿತ್ರಾ ಮಹಾಜನ್ ಅವರು ಒಪ್ಪಿಗೆ ನೀಡಿದ್ದ ಪ್ರಸ್ತಾವಗಳಲ್ಲಿ ನಿರ್ಮಾಣ ವೆಚ್ಚವನ್ನು ಯಾವ ಅಧಿಕೃತ ದಾಖಲೆಯಲ್ಲೂ ಉಲ್ಲೇಖಿಸಿರಲಿಲ್ಲ. ಆರೆ 3,000 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಒಪ್ಪಿಗೆ ನೀಡಲಾಗಿತ್ತು ಎಂದು ಈಗ ಸುಳ್ಳು ಸುದ್ದಿ ಹರಡಲಾಗುತ್ತಿದೆ' ಎಂದು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು