ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Fact Check: ಉಕ್ರೇನ್ ಬೆಂಬಲಿಸಿ ಶ್ವೇತಭವನದ ಎದುರು ಪ್ರತಿಭಟನೆ ನಡೆದಿಲ್ಲ

Last Updated 25 ಫೆಬ್ರುವರಿ 2022, 4:28 IST
ಅಕ್ಷರ ಗಾತ್ರ

ರಷ್ಯಾ ಅಧ್ಯಕ್ಷವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲಿನ ಮಿಲಿಟರಿ ಕಾರ್ಯಾಚರಣೆಯನ್ನು ಗುರುವಾರಘೋಷಿಸುತ್ತಿದ್ದಂತೆಯೇ, ರಷ್ಯಾ ಸೇನೆ ಉಕ್ರೇನ್ ಮೇಲೆ ಆಕ್ರಮಣಮುಂದುವರಿಸಿದೆ. ಗುರುವಾರ ಒಂದೇ ದಿನ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ ಒಟ್ಟು137 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿಕೊಂಡಿದ್ದಾರೆ.

ಪುಟಿನ್ ನಡೆಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ. ರಷ್ಯಾದ ಮೇಲೆ ಕಠಿಣ ನಿರ್ಬಂಧಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ,ಉಕ್ರೇನ್‌ಗೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿ ಅಮೆರಿಕನ್ನರುಶ್ವೇತಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾದ ವಿಡಿಯೊವೊಂದು ವೈರಲ್ ಆಗಿದೆ.

ವೈರಲ್ ಆಗುತ್ತಿರುವ ವಿಡಿಯೊ ಜೊತೆಗೆ, 'ಶ್ವೇತಭವನದ ಹೊರಗೆ, ಉಕ್ರೇನ್ ಬೆಂಬಲಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ರಷ್ಯಾ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ' ಎಂದು ಬರೆಯಲಾಗಿದೆ.

ಈ ಬಗ್ಗೆ ಇಂಡಿಯಾ ಟುಡೇ ಫ್ಯಾಕ್ಟ್‌ಚೆಕ್ ನಡೆಸಿದ್ದು, ಸದ್ಯ ವೈರಲ್ ಆಗುತ್ತಿರುವ ವಿಡಿಯೊ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದೆ. ಇದುಫೆ.23, 2022ರಂದು (ಬುಧವಾರ) ಉಕ್ರೇನ್‌ನ ಕ್ರಾಮಟೊರ್ಸ್ಕ್‌ನಲ್ಲಿ ನಡೆದ ದೇಶ ಭಕ್ತರ ರ‍್ಯಾಲಿದ್ದಾಗಿದೆಎಂದು ತಿಳಿಸಿದೆ.

ವಿಡಿಯೊದಲ್ಲಿ ಶ್ವೇತಭವನದಂತೆಯೇ ಕಾಣುವ ಕಟ್ಟಡವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅದು ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸವಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT