Fact check: ಸೇನೆ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ?

ಸೇನೆ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆಗಳು ಆಗಿರುವ ಕುರಿತು ಪ್ರಕಟಣೆಯೊಂದು ಜಾಲತಾಣಗಳಲ್ಲಿ ಹರಿದಾಡಿತ್ತು. 2022ರಲ್ಲಿ ನಡೆಯುವ ಸೇನಾ ಸಿಬ್ಬಂದಿ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಯೋಮಿತಿಯಲ್ಲಿ ಬದಲಾವಣೆಗಳನ್ನು ಸರ್ಕಾರ ಮಾಡಿದೆ. ಈ ಬಾರಿಯ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ಎರಡು ವರ್ಷಗಳ ರಿಯಾಯಿತಿ ನೀಡಲಾಗಿದೆ ಎಂದು ಅದರಲ್ಲಿ ಸೂಚಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಚಿತ್ರವೊಂದನ್ನು ಕೂಡಾ ಪೋಸ್ಟ್ ಮಾಡಲಾಗಿತ್ತು.
ಈ ಮಾಹಿತಿ ಸುಳ್ಳು ಎಂದು ಸರ್ಕಾರವೇ ಹೇಳಿದೆ. ಈ ಪ್ರಕಟಣೆಯ ಸ್ಕ್ರೀನ್‌ಶಾಟ್ ಸಮೇತ ಟ್ವೀಟ್ ಮಾಡಿರುವ ಪಿಐಬಿ ಫ್ಯಾಕ್ಟ್ ಚೆಕ್, ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ವಯೋಮಿತಿ ಸಂಬಂಧಿಸಿದಂತೆ ಯಾವುದೇ ಬದಲಾವಣೆ ಆಗಿಲ್ಲ. ಅಭ್ಯರ್ಥಿಗಳು ಈ ಮಾಹಿತಿಯನ್ನು ನಂಬಬಾರದು. ಸೇನಾ ನೇಮಕಾತಿಗಾಗಿಯೇ ಇರುವ ಅಧಿಕೃತ ವೆಬ್‌ಸೈಟ್ joinindianarmy.nic.in. ನಲ್ಲಿ ನೇಮಕಾತಿ ಮಾಹಿತಿಗಳು ಲಭ್ಯವಿವೆ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.