ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಭುಗಿಲೆದ್ದಿದೆ. ಫಲಿತಾಂಶ ಪ್ರಕಟವಾದ ಬಳಿಕ ಈವರೆಗೆ 14 ಮಂದಿ ಮೃತಪಟ್ಟಿದ್ದಾರೆ. ಆಡಳಿತ ಹಾಗೂ ವಿರೋಧ ಪಕ್ಷಗಳ ಕಾರ್ಯಕರ್ತರು ಘರ್ಷಣೆಯಲ್ಲಿ ತೊಡಗಿದ್ದು, ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಈ ಪೈಕಿ ಯುವಕರು ಪೊಲೀಸ್ ಜೀಪ್‌ಗೆ ಬೆಂಕಿ ಹಚ್ಚುತ್ತಿರುವ ವಿಡಿಯೊ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಹಲವರು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ.

ವಿಡಿಯೊದ ಮೂಲ ಹುಡುಕಿದ ಆಲ್ಟ್ ನ್ಯೂಸ್ ತಂಡಕ್ಕೆ ಅದು ಬಂಗಾಳಕ್ಕೆ ಸಂಬಂಧಿಸಿದ್ದು ಅಲ್ಲ ಎಂಬುದು ದೃಢಪಟ್ಟಿದೆ. 2021ರ ಜನವರಿ 31ರಂದು ಒಡಿಶಾದಲ್ಲಿ ಯುವಕನ ಸಾವು ಖಂಡಿಸಿ ಸ್ಥಳೀಯರು ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆಸಿದ ಘಟನೆಯ ವಿಡಿಯೊ ಅದು ಎಂದು ಸ್ಪಷ್ಟಪಡಿಸಿದೆ. ಈ ವಿಡಿಯೊ ಕಳಿಂಗ ಟಿ.ವಿಯಲ್ಲಿ ಪ್ರಸಾರವಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್ ಸೇರಿದಂತೆ ಕೆಲವು ಪತ್ರಿಕೆಗಳು ಈ ವರದಿಯನ್ನು ಪ್ರಕಟಿಸಿದ್ದು, ಈ ವಿಡಿಯೊಗೂ, ಬಂಗಾಳದ ಹಿಂಸಾಚಾರಕ್ಕೂ ಸಂಬಂಧವಿಲ್ಲ ಎಂದು ವೆಬ್‌ಸೈಟ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.