FACT CHECK: ಜಿತೇಂದ್ರ ಸಿಂಗ್ ಅವರು ರಾಹುಲ್ ಷೂ ಲೇಸ್ ಕಟ್ಟಿದ್ದು ನಿಜವೇ?

‘ಭಾರತ್ ಜೋಡೋ’ ಯಾತ್ರೆಯ ವೇಳೆ ಹರಿಯಾಣದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿ ಅವರ ಷೂ ಲೇಸ್ ಕಟ್ಟಿದ್ದಾರೆ ಎನ್ನಲಾದ ವಿಡಿಯೊ ಹರಿದಾಡುತ್ತಿದೆ. ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ ಅವರು ವಿಡಿಯೊವನ್ನು ಟ್ವೀಟ್ ಮಾಡಿದ್ದು, ರಾಹುಲ್ ಸೊಕ್ಕಿನ ವರ್ತನೆ ತೋರಿದ್ದಾರೆ ಎಂದು ಟೀಕಿಸಿದ್ದಾರೆ. ಹಲವು ಬಿಜೆಪಿ ಮುಖಂಡರೂ ಮರುಟ್ವೀಟ್ ಮಾಡಿದ್ದಾರೆ. ಆದರೆ ಇದು ಸುಳ್ಳು.
ಜಿತೇಂದ್ರ ಸಿಂಗ್ ಅವರು ರಾಹುಲ್ ಅವರ ಷೂಲೇಸ್ ಕಟ್ಟಿದ್ದಾರೆ ಎಂಬುದು ಸುಳ್ಳು ಎಂದು ‘ಆಲ್ಟ್ ನ್ಯೂಸ್’ ವರದಿ ಮಾಡಿದೆ. ಮತ್ತೊಂದು ಮಗ್ಗುಲಿನ ದೃಶ್ಯವನ್ನು ಪೋಸ್ಟ್ ಮಾಡಿರುವ ಜಿತೇಂದ್ರ ಸಿಂಗ್, ‘ನನ್ನ ಕಾಲಿನ ಷೂಲೇಸ್ ಅನ್ನು ನಾನು ಕಟ್ಟಿಕೊಂಡೆ. ಇದನ್ನು ಬಿಜೆಪಿ ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ. ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿ, ಸುಳ್ಳುಗಳನ್ನು ಹೆಣೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಅವರು, ಮತ್ತೊಂದು ಆಯಾಮದ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.