ಬುಧವಾರ, ಡಿಸೆಂಬರ್ 8, 2021
19 °C

ಫ್ಯಾಕ್ಟ್ ಚೆಕ್: ಸಲ್ಮಾನ್ ಖಾನ್ ತಪಾಸಣೆ ಮಾಡಿದ ಸಿಬ್ಬಂದಿಗೆ ಶಿಕ್ಷೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ತಮ್ಮ ಹೊಸ ಚಿತ್ರದ ಚಿತ್ರೀಕರಣಕ್ಕಾಗಿ ರಷ್ಯಾಕ್ಕೆ ತೆರಳಿದ್ದಾರೆ. ಅವರು ವಿಮಾನ ನಿಲ್ದಾಣ ಪ್ರವೇಶಿಸುವಾಗ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿಯೊಬ್ಬರು ತಡೆದು, ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ–ವಿರೋಧದ ಚರ್ಚೆ ನಡೆದಿದೆ. ತಪಾಸಣೆ ನಡೆಸಿದ ಭದ್ರತಾ ಸಿಬ್ಬಂದಿಯ ಮೊಬೈಲ್ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಅವರು ಮಾಧ್ಯಮಗಳ ಜತೆ ಮಾತನಾಡುವುದನ್ನು ನಿರ್ಬಂಧಿಸಲಾಗಿದೆ ಎಂಬ ವರದಿಗಳು ಬಂದಿವೆ.

ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ವರದಿಗಳನ್ನು ಸಿಐಎಸ್‌ಎಫ್ ಅಲ್ಲಗಳೆದಿದೆ. ಮಿಗಿಲಾಗಿ, ಕರ್ತವ್ಯಪ್ರಜ್ಞೆ ಮೆರೆದ ಆ ಸಿಬ್ಬಂದಿಗೆ ಬಹುಮಾನ ನೀಡಲಾಗಿದೆ ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭದ್ರತಾ ಸಿಬ್ಬಂದಿಯ ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಲಾಗಿದೆ. ತಾರತಮ್ಯ ಮಾಡದೇ, ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದನ್ನು ಹೊಗಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು