ಶುಕ್ರವಾರ, ಅಕ್ಟೋಬರ್ 23, 2020
21 °C

ವಿದ್ಯಾರ್ಥಿ ವೇತನಕ್ಕಾಗಿ ಪರೀಕ್ಷೆ: ಸುಳ್ಳು ಸುದ್ದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉನ್ನತ ಅಧ್ಯಯನದ ಆಕಾಂಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ ನೀಡುವ ಪರೀಕ್ಷೆಯನ್ನು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಸಂಸ್ಥೆ ಆಯೋಜಿಸುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ‘ಎಂ ಅಂಡ್ ಎನ್ ಸ್ಕಾಲರ್‌ಶಿಪ್ ಪ್ರೈವೇಟ್ ಲಿಮಿಟೆಡ್’ ಎಂದು ಮೇಲ್ಭಾಗದಲ್ಲಿ ಉಲ್ಲೇಖಿಸಲಾಗಿದೆ. nationalscholarshipexa.com ಎಂಬ ವೆಬ್‌ಸೈಟ್‌ ವಿಳಾಸವನ್ನು ಸಹ ನೀಡಲಾಗಿದೆ.

ವಿದ್ಯಾರ್ಥಿವೇತನ ನೀಡುವ ಪರೀಕ್ಷೆಯನ್ನು ಕಾರ್ಪೊರೇಟ್ ವ್ಯವಹಾಗಳ ಸಚಿವಾಲಯ ಆಯೋಜಿಸುತ್ತಿಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ತಿಳಿಸಿದೆ. ಈ ವೆಬ್‌ಸೈಟ್ ನಕಲಿ ಎಂದು ಅದು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು