ಮಂಗಳವಾರ, ಮಾರ್ಚ್ 28, 2023
23 °C

Fact Check: ಲಾರಿ ಹಿಂಬದಿ ಬರಹ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟ್ರಕ್‌ನ ಹಿಂಭಾಗದಲ್ಲಿ ವ್ಯಂಗ್ಯದ ಧಾಟಿಯಲ್ಲಿ ಬರೆದಿರುವ ಬರಹದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ದಯವಿಟ್ಟು ಹಾರ್ನ್ ಮಾಡಬೇಡಿ. ಮೋದಿ ಸರ್ಕಾರ ನಿದ್ರಿಸುತ್ತಿದೆ’ ಎಂಬುದಾಗಿ ಉಲ್ಲೇಖಿಸಲಾಗಿರುವ ಚಿತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡ ಶಶಿ ತರೂರ್‌ ಅವರು ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. 

ಈ ಚಿತ್ರದಲ್ಲಿ ಉಲ್ಲೇಖಿಸಿರುವ ಬರಹವನ್ನು ತಿರುಚಲಾಗಿದೆ ಎಂದು ನ್ಯೂಸ್‌ಮೀಟರ್ ವೆಬ್‌ಸೈಟ್ ವರದಿ ಮಾಡಿದೆ. 2018ರಿಂದಲೂ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ‘ಹೈವೇ ಡ್ರೈವಿಂಗ್ ಇನ್ ಇಂಡಿಯಾ’ ಎಂಬ ಬ್ಲಾಗ್‌ನಲ್ಲಿ ಮೂಲ ಚಿತ್ರ  ಪ್ರಕಟವಾಗಿದೆ ಎಂಬ ವಿಚಾರವು ರಿವರ್ಸ್ ಇಮೇಜ್ ಮೂಲಕ ಪರಿಶೀಲಿಸಿದಾಗ ಗೊತ್ತಾಗಿದೆ. 2019ರಲ್ಲಿ ಕಾಂಗ್ರೆಸ್‌ನ ಟ್ವಿಟರ್ ಹ್ಯಾಂಡಲ್‌ ಸಹ ತಿರುಚಿದ ಚಿತ್ರವನ್ನು ಪ್ರಕಟಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು