ಗುರುವಾರ , ಮಾರ್ಚ್ 23, 2023
20 °C

Fact Check: ಉತ್ತರ ಪ್ರದೇಶದಲ್ಲಿ ಮಸೀದಿ ನೆಲಸಮ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಮಸೀದಿಯೊಂದನ್ನು ಬುಲ್ಡೋಜರ್ ನೆಲಸಮ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಮಸೀದಿಯನ್ನು ಕೆಡವಲಾಗಿದೆ ಎಂಬುದಾಗಿ ಚರ್ಚೆಯಾಗುತ್ತಿದೆ. ಟ್ವಿಟರ್ ಬಳಕೆದಾರರೊಬ್ಬರು ಈ ಚಿತ್ರವನ್ನು ಹಂಚಿಕೊಂಡಿದ್ದು, ‘ಒಳ್ಳೆಯ ಚಿತ್ರ’ ಎಂದು ಉಲ್ಲೇಖಿಸಿದ್ದಾರೆ. 

ವೈರಲ್ ಚಿತ್ರದ ಬಗ್ಗೆ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆಯು ಪರಿಶೀಲನೆ ನಡೆಸಿದ್ದು, ಈ ಚಿತ್ರವನ್ನು 2014ರಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮಾಹಿತಿ ನೀಡಿದೆ. ಅಹಮದಾಬಾದ್‌ನ ಜಹಾಪುರ್ ಪ್ರದೇಶದಲ್ಲಿ ಜಾಗ ಅತಿಕ್ರಮಣ ಮಾಡಿಕೊಂಡು ನಿರ್ಮಿಸಿದ್ದ ಧಾರ್ಮಿಕ ಕಟ್ಟಡವನ್ನು ಅಹಮದಾಬಾದ್ ಪಾಲಿಕೆಯು ತೆರವುಗೊಳಿಸಿದೆ ಎಂಬುದಾಗಿ ಹಲವು ಸುದ್ದಿಮಾಧ್ಯಮಗಳು ವರದಿ ಮಾಡಿವೆ. ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಪರಿಶೀಲನೆಗೆ ಒಳಪಡಿಸಿದಾಗ ಈ ಮಾಹಿತಿ ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು