ಸೋಮವಾರ, ಆಗಸ್ಟ್ 8, 2022
22 °C

ಫ್ಯಾಕ್ಟ್‌ ಚೆಕ್‌: ಕಲ್ಲು ಎಸೆಯುವವರ ಕಾಲು ಮುರಿಯಿರಿ ಎಂದರೇ ಯುಪಿ ಸಿಎಂ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪೊಲೀಸರು ಮತ್ತು ಸಶಸ್ತ್ರ ಪಡೆ ಸಿಬ್ಬಂದಿ ಗಸ್ತು ತಿರುಗುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ಒಂದು ಕಲ್ಲು ಬಿದ್ದರೂ, ಕಲ್ಲು ಎಸೆಯುವವರನ್ನು ಹಿಡಿದು ಅವರ ಕೈ, ಕಾಲನ್ನು ಮುರಿಯುವಂತೆ ಉತ್ತರ ಪ್ರದೇಶದ ಪೊಲೀಸರಿಗೆ ಆದೇಶ ನೀಡಲಾಗಿದೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಪೊಲೀಸ್‌ ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತಿನಲ್ಲಿ ಇರಿಸಲಾಗುವುದು ಎಂಬ ಮಾಹಿತಿಯನ್ನು ಈ ವಿಡಿಯೊ ಜೊತೆ ನೀಡಲಾಗಿದೆ.

‘ಈ ವಿಡಿಯೊ ಜೊತೆ ನೀಡಲಾಗಿರುವ ಮಾಹಿತಿ ಸತ್ಯಕ್ಕೆ ದೂರವಾಗಿದೆ. ಈ ಮಾಹಿತಿಯನ್ನು ಸಮರ್ಥಿಸುವಂಥ ಅಧಿಕೃತ ಪ್ರಕಟಣೆಗಾಗಿ ಹುಡುಕಿದೆವು. ಆದರೆ ಈ ಕುರಿತು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದ ಪ್ರಕಟಣೆ ನಮಗೆ ದೊರಕಲಿಲ್ಲ. ಈ ತಿಂಗಳ ಆರಂಭದಲ್ಲಿ ಕೆಲವು ನಗರಗಳಲ್ಲಿ ಐಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ವಿಧಿಸಲಾಗಿತ್ತು. ಇನ್ನೂ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಪಡೆ ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗಿತ್ತು. ಆದರೆ, ವಿಡಿಯೊದಲ್ಲಿ ಹೇಳಿರುವಂತಹ ಯಾವುದೇ ಪ್ರಕಟಣೆ ಹೊರಡಿಸಿಲ್ಲ’ ಎಂದು ‘ದಿ ಲಾಜಿಕಲ್‌ ಇಂಡಿಯನ್‌’ ವೇದಿಕೆ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು