ಶುಕ್ರವಾರ, ಮೇ 27, 2022
26 °C

ಫ್ಯಾಕ್ಟ್‌ಚೆಕ್‌: ಪ್ರತ್ಯೇಕ ದೇಶಕ್ಕಾಗಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೃಹತ್‌ ಗುಂಪೊಂದನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಘಟನೆ ಅಸ್ಸಾಂನಲ್ಲಿ ನಡೆದಿದೆ. ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇರಿಸಿ, ರ‍್ಯಾಲಿ ನಡೆಸುತ್ತಿದ್ದ ಮುಸ್ಲಿಮರನ್ನು ಅಸ್ಸಾಂ ಪೊಲೀಸರು ಥಳಿಸಿದ್ದಾರೆ ಎಂದು ಈ ವಿಡಿಯೊವನ್ನು ಬಿಂಬಿಸಲಾಗಿದೆ. ‘ಪ್ರತ್ಯೇಕ ದೇಶಕ್ಕಾಗಿ ಆಗ್ರಹಿಸಿದ್ದ ಮುಸ್ಲಿಮರಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ಸರಿಯಾದ ರೀತಿಯಲ್ಲಿ ಪಾಠ ಕಲಿಸಿದ್ದಾರೆ’ ಎಂದು ವಿಡಿಯೊಗೆ ಅಡಿಬರಹ ನೀಡಲಾಗಿದೆ.

ಇದು ಅಸ್ಸಾಂನಲ್ಲಿ ನಡೆದ ಘಟನೆಯಲ್ಲ, ಬದಲಾಗಿ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ 2020ರ ಏಪ್ರಿಲ್‌ನಲ್ಲಿ ನಡೆದ ಘಟನೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಿರುವಂತೆ ಇದು ಪ್ರತ್ಯೇಕ ರಾಷ್ಟ್ರಕ್ಕಾಗಿ ನಡೆದ ರ‍್ಯಾಲಿಯಲ್ಲ. ಮೊದಲ ಲಾಕ್‌ಡೌನ್‌ ವೇಳೆ ಪೊಲೀಸರು ಬರೇಲಿಯ ಗ್ರಾಮವೊಂದಕ್ಕೆ ತೆರಳಿ, ಕೋವಿಡ್‌ ನಿಯಮಗಳನ್ನು ಪಾಲಿಸಲು ಜನರಿಗೆ ಹೇಳಿದ್ದರು. ಆ ವೇಳೆ ಸ್ಥಳೀಯರು ಪೊಲೀಸರ ಮೇಲೆ ದಾಳಿ ನಡೆಸಿದ್ದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಸ್ಥಳೀಯರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು