ಶುಕ್ರವಾರ, ಅಕ್ಟೋಬರ್ 23, 2020
21 °C

ಫ್ಯಾಕ್ಟ್ ಚೆಕ್: ಕಾಮೆಡ್‌–ಕೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕೋವಿಡ್‌ ಬಂದಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವ ಕುರಿತು ದೇಶದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಆದರೆ ‘ಕರ್ನಾಟಕದಲ್ಲಿ ನಡೆದ ಕಾಮೆಡ್–‌ಕೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ 5,371 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿದ್ದು, 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. 57 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ ಎಂದು ಹೇಳುವ ಸ್ಟ್ರೀನ್‌ಶಾಟ್‌ಗಳು ಸಾಕಷ್ಟು ವೈರಲ್ ಆಗಿವೆ.

ಇದು ಸುಳ್ಳು ಸುದ್ದಿ. ಕಾಮೆಡ್‌–ಕೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕೋವಿಡ್‌ ತಗುಲಿದೆ ಎಂದು ಯಾವ ಸುದ್ದಿ ವಾಹಿನಿಯೂ ವರದಿ ಮಾಡಿಲ್ಲ. ಆದರೆ ಸುದ್ದಿ ವಾಹಿನಿಯೊಂದರ ಲೋಗೊ ಬಳಸಿಕೊಂಡು ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ. ಕಾಮೆಡ್–‌ಕೆ ಎಂದು ಉಲ್ಲೇಖಿಸುವಾಗ COMDEK ಎಂದು ತಪ್ಪಾಗಿ ಬರೆಯಲಾಗಿದೆ. ಕ್ವಾರಂಟೈನ್ ಪದದ ಇಂಗ್ಲಿಷ್ ಸ್ಪೆಲಿಂಗ್ ಕೂಡ ತಪ್ಪಾಗಿದೆ ಎಂಬುದನ್ನು ಆಲ್ಟ್‌ನ್ಯೂಸ್ ಪತ್ತೆಹಚ್ಚಿ ವರದಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು