ಬುಧವಾರ, ಮೇ 19, 2021
21 °C

Fact check: ಸೀತಾಲ್‌ಕುಚಿಯಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಮೇಲೆ ದಾಳಿ ನಿಜವೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಏಪ್ರಿಲ್ 10ರಂದು ಸೀತಾಲ್‌ಕುಚಿಯಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಮೇಲೆ ಅಲ್ಲಿಯ ಜನರು ನಡೆಸಿದ ದಾಳಿಯಲ್ಲಿ ಸಿಬ್ಬಂದಿ ಒಬ್ಬರು ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಭ್ಯರ್ಥಿ ಚಿತ್ರವೊಂದನ್ನು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ ಅನ್ನು ಬಿಜೆಪಿಯ ಹಲವು ನಾಯಕರು ಮರುಟ್ವೀಟ್ ಮಾಡಿದ್ದಾರೆ.

ಆದರೆ ಇದು ಸುಳ್ಳುಸುದ್ದಿ ಎಂದು ದಿ ಲಾಜಿಕಲ್ ಇಂಡಿಯ್ನ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ. ಜಾರ್ಖಂಡ್‌ನ ಬಗಮಾರಾದ ಗಣಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಸಿಐಎಸ್‌ಎಫ್ ಸಿಬ್ಬಂದಿ ಮೇಲೆ ಲಂಗೂರ್ ದಾಳಿ ನಡೆಸಿತ್ತು. ಅದರಲ್ಲಿ ಸಿಬ್ಬಂದಿ ಗಾಯಗೊಂಡಿದ್ದರು. ಅದೇ ಚಿತ್ರವನ್ನು ಈಗ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ ಎಂದು ಲಾಜಿಕಲ್ ಇಂಡಿಯನ್ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು