ಶನಿವಾರ, ಅಕ್ಟೋಬರ್ 1, 2022
20 °C

ಫ್ಯಾಕ್ಟ್‌ಚೆಕ್‌: ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ–ವಿಡಿಯೊ ನಿಜವೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋದಾವರಿ ನದಿಯಿಂದ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲಾಯಿತು ಎಂಬುದನ್ನು ಬಿಂಬಿಸುವ ವಿಡಿಯೊವೊಂದು ಇತ್ತೀಚೆಗೆ ಕೆಲವು ಸುದ್ದಿವಾಹಿನಿಗಳಲ್ಲಿ ಪ್ರಸಾರವಾಯಿತು. ಪ್ರವಾಹದಲ್ಲಿ ಸಿಲುಕಿದ್ದ ಅರ್ತ್‌ಮೂವರ್ ಯಂತ್ರದ ಮೇಲೆ ಕೆಲ ಜನರು ರಕ್ಷಣೆ ಪಡೆದಿದ್ದರು. ಸಂತ್ರಸ್ತರ ನೆರವಿಗೆ ಧಾವಿಸಿದ ವಾಯುಪಡೆಯ ಎರಡು ವಿಶೇಷ ಹೆಲಿಕಾಪ್ಟರ್‌ಗಳು ಹಗ್ಗದ ಮೂಲಕ ಜನರನ್ನು ರಕ್ಷಿಸಿದ ರೋಚಕ ವಿಡಿಯೊ ಸಾಕಷ್ಟು ವೈರಲ್ ಆಗಿತ್ತು. ಇದು ತೆಲಂಗಾಣದಲ್ಲಿ ಉಂಟಾದ ಪ್ರವಾಹದ ವಿಡಿಯೊ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಯಿತು.

ಸುದ್ದಿವಾಹಿನಿಗಳು ಪ್ರಸಾರ ಮಾಡಿದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾದ ವಿಡಿಯೊ ತೆಲಂಗಾಣದಲ್ಲಿ ಈ ಬಾರಿ ಉಂಟಾದ ಪ್ರವಾಹಕ್ಕೆ ಸಂಬಂಧಿಸಿದ್ದಲ್ಲ ಎಂದು ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆ ತಿಳಿಸಿದೆ. 2021ರ ನವೆಂಬರ್ 20ರಂದು ಯೂಟ್ಯೂಬ್‌ನಲ್ಲಿ ಈ ವಿಡಿಯೊ ಅಪ್‌ಲೋಡ್ ಆಗಿದೆ. ಆಂಧ್ರ ಪ್ರದೇಶದ ಚಿತ್ರಾವತಿ ನದಿಯ ಪ್ರವಾಹದಲ್ಲಿ ಸಿಲುಕಿದ ಜನರನ್ನು ರಕ್ಷಿಸಲಾದ ವಿಡಿಯೊ ಇದಾಗಿದೆ. ಕಳೆದ ವರ್ಷ ಉಂಟಾಗಿದ್ದ ಪ್ರವಾಹದ ಕುರಿತು ಎನ್‌ಡಿಟಿವಿ ಸೇರಿದಂತೆ ಹಲವು ಸುದ್ದಿವಾಹಿನಿಗಳು ವರದಿ ಮಾಡಿದ್ದವು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು