ಬುಧವಾರ, ಮಾರ್ಚ್ 3, 2021
18 °C

ಫ್ಯಾಕ್ಟ್‌ಚೆಕ್‌: ಸ್ಟಾಫ್ ಸೆಲೆಕ್ಷನ್ ಕಮಿಷನ್ ಟ್ವಿಟರ್ ಖಾತೆ ಅಧಿಕೃತ ಅಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಅಧೀನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಕರ್ತವ್ಯವನ್ನು ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿರ್ವಹಿಸುತ್ತದೆ. @SSCorg_in ಎಂಬುದು ಅಧಿಕೃತ ಟ್ವಿಟರ್ ತಾಣದ ಹೆಸರು ಎಂಬ ಮಾಹಿತಿ ಹರಿದಾಡುತ್ತಿದೆ. 

ಈ ಬಗ್ಗೆ ಪರಿಶೀಲನೆ ನಡೆಸಿದ ಪಿಐಬಿ ಫ್ಯಾಕ್ಟ್ ಚೆಕ್ ತಂಡಕ್ಕೆ ಸ್ಟಾಫ್ ಸೆಲಕ್ಷನ್ ಕಮಿಷನ್‌ನ ಅಧಿಕೃತ ಟ್ವಿಟರ್ ಖಾತೆ ದೊರೆತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ಮಾಹಿತಿ ತಪ್ಪಾಗಿದೆ. ಸ್ಟಾಫ್ ಸೆಲಕ್ಷನ್ ಕಮಿಷನ್ ಅಧಿಕೃತವಾಗಿ ಟ್ವಿಟರ್ ಖಾತೆ ಬಳಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ. ಹೆಚ್ಚಿನ ಮಾಹಿತಿಗೆ ಆಯೋಗದ ವೆಬ್‌ಸೈಟ್ https://ssc.nic.in ನೋಡಬಹುದು. ನಕಲಿ ಟ್ವಿಟರ್ ಖಾತೆ ಅನುಸರಿಸಿ ಮೋಸ ಹೋಗಬೇಡಿ ಎಂದು ಜನರಿಗೆ ಸಲಹೆ ನೀಡಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು