ಫ್ಯಾಕ್ಟ್‌ಚೆಕ್: ಕೇಂದ್ರ ಸರ್ಕಾರ ತುಟ್ಟಿಭತ್ಯೆ ಘೋಷಿಸಿಲ್ಲ
ಹೊಸ ವರ್ಷಕ್ಕೆ ಮುಂಚಿತವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಉಡುಗೊರೆ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಶೇ 24ರಷ್ಟು ತುಟ್ಟಿಭತ್ಯೆಯನ್ನು (ಡಿ.ಎ) ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ಧಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಹಿಂದಿ ಸುದ್ದಿವಾಹಿನಿಯೊಂದರ ಸ್ಕ್ರೀನ್‌ಶಾಟ್ ಈ ಮಾಹಿತಿ ನೀಡುತ್ತಿದ್ದು, ಎಲ್ಲೆಡೆ ಸುದ್ದಿಯಾಗುತ್ತಿದೆ.
ಕೇಂದ್ರ ಸರ್ಕಾರವು ತುಟ್ಟಿಭತ್ಯೆಯನ್ನು ಘೋಷಿಸಿಲ್ಲ. ನಿರ್ಮಲಾ ಸೀತಾರಾಮನ್ ಅವರ ಸುದ್ದಿಗೋಷ್ಠಿಯ ಚಿತ್ರ ಬಳಸಿಕೊಂಡು, ಮಾಹಿತಿಯನ್ನು ತಿರುಚಲಾಗಿದೆ. ಸ್ಕ್ರೀನ್‌ಶಾಟ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ಪಿಐಬಿ ಫ್ಯಾಕ್ಟ್‌ಚೆಕ್ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.