ಮಂಗಳವಾರ, ಡಿಸೆಂಬರ್ 1, 2020
25 °C

Fact Check| ಆಹಾರ ಉದ್ದಿಮೆಗಳು ಎಫ್ಎಸ್ಎಸ್‌ಎಐ ಪರವಾನಗಿ ಪಡೆಯಬೇಕೆ?

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಆಹಾರಕ್ಕೆ ಸಂಬಂಧಿಸಿದ ವ್ಯವಹಾರ ನಡೆಸುವ ಎಲ್ಲ ಉದ್ಯಮ ಸಂಸ್ಥೆಗಳು ‘ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ’ದಿಂದ (ಎಫ್ಎಸ್ಎಸ್‌ಎಐ) ಪರವಾನಗಿ ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಮುಂದಿನ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ – ಇಂತಹ ಮಾಹಿತಿ ಇರುವ ಸುದ್ದಿಯು ಹಿಂದಿ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದು, ವ್ಯಾಪಾರಿಗಳನ್ನು ಗೊಂದಲಕ್ಕೆ ಸಿಲುಕಿಸಿದೆ. 

ಪತ್ರಿಕೆಯಲ್ಲಿ ಪ್ರಕಟವಾಗಿರುವ ಸುದ್ದಿಯು ಸಂಪೂರ್ಣ ಸತ್ಯವಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಘಟಕ ತಿಳಿಸಿದೆ. ವರ್ಷಕ್ಕೆ ₹20 ಕೋಟಿ ವಹಿವಾಟು ನಡೆಸುವ ಸಂಸ್ಥೆಗಳು ಮಾತ್ರ ಎಫ್ಎಸ್ಎಸ್‌ಎಐನಿಂದ ಪರವಾನಗಿ ಪಡೆಯಬೇಕು ಎಂಬ ನಿಯಮ ಇದೆ. ಇದಕ್ಕೂ ಕಡಿಮೆ ಮೊತ್ತದ ವಹಿವಾಟು ನಡೆಸುವ ವ್ಯಾಪಾರಿಗಳು ಪರವಾನಗಿ ಪಡಯುವ ಅಗತ್ಯವಿಲ್ಲ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು