ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುತ್ತಿದೆಯೇ ಭಾರತೀಯ ಪ್ರಾದೇಶಿಕ ಸೇನೆ?

Last Updated 16 ಜುಲೈ 2021, 19:31 IST
ಅಕ್ಷರ ಗಾತ್ರ

‘ಭಾರತೀಯ ಪ್ರಾದೇಶಿಕ ಸೇನೆಯು ತನ್ನಲ್ಲಿ ತೆರವಾಗಿರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರಿಗೆ ಇರಬೇಕಾದ ಅರ್ಹತೆಯನ್ನು ಅಧಿಸೂಚನೆಯಲ್ಲಿ ಕೊಡಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಿ’ ಎಂಬ ವಿವರ ಇರುವ ಸಂದೇಶವು ವೈರಲ್ ಆಗಿದೆ. ಇದನ್ನು ಪೋಸ್ಟರ್‌ನಂತೆಯೂ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶ ಮತ್ತು ಪೋಸ್ಟರ್‌ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್ ಒಂದನ್ನೂ ನೀಡಲಾಗಿದೆ.

‘ಇದು ಸುಳ್ಳು ಸುದ್ದಿ.ಭಾರತೀಯ ಸೇನೆ ಮತ್ತು ಅರೆಸೇನಾಪಡೆಗಳು ಈ ರೀತಿಯ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ತೆರವಾಗಿರುವ ಹುದ್ದೆಗಳಿಗೆ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಈ ಸಂದೇಶದಲ್ಲಿ ನೀಡಲಾಗಿರುವ ಮಾಹಿತಿ ಸಂಪೂರ್ಣ ಸುಳ್ಳು. ಸಂದೇಶದಲ್ಲಿ ನೀಡಲಾಗಿರುವ ಲಿಂಕ್ ಅಧಿಕೃತ ಜಾಲತಾಣದ್ದಲ್ಲ. ಈ ಸಂದೇಶದ ಮೋಸದ ಬಲೆಗೆ ಬೀಳಬೇಡಿ’ ಎಂದು ಪಿಐಬಿ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT