ಗುರುವಾರ , ಅಕ್ಟೋಬರ್ 28, 2021
18 °C

Fact Check| ವಿದೇಶದಲ್ಲಿ ಓದುವವರಿಗೆ ಪ್ರಮಾಣಪತ್ರ ಕಡ್ಡಾಯ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿದೇಶದಲ್ಲಿ ವೈದ್ಯಕೀಯ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಹತಾ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯ ಎಂದು ತಿಳಿಸುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ‘ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಈ ಸುತ್ತೋಲೆ ಹೊರಡಿಸಿದ್ದು, 2019ರ ಜನವರಿ 1ರ ಬಳಿಕ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರು ಈ ಪತ್ರ ಪಡೆಯಬೇಕಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದಕ್ಕೆ 2021ರ ಡಿಸೆಂಬರ್ 31ರ ಗಡುವು ನೀಡಲಾಗಿದೆ. 

ಈ ಬಗ್ಗೆ ಪರಿಶೀಲನೆ ನಡೆಸಿರುವ ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆಯು, ಇದೊಂದು ನಕಲಿ ಪತ್ರ ಎಂದು ಸ್ಪಷ್ಟಪಡಿಸಿದೆ. ಇಂತಹ ಯಾವುದೇ ಸುತ್ತೋಲೆಯನ್ನು ಎನ್‌ಎಂಸಿ ಹೊರಡಿಸಿಲ್ಲ. ಸಾರ್ವಜನಿಕರನ್ನು ದಾರಿತಪ್ಪಿಸುವ ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದೆ. ವಿದ್ಯಾರ್ಥಿಯು ಭಾರತದ ಹೊರಗಿನ ಯಾವುದೇ ವೈದ್ಯಕೀಯ ಸಂಸ್ಥೆಯಿಂದ ಪ್ರಾಥಮಿಕ ವೈದ್ಯಕೀಯ ಅರ್ಹತೆಯನ್ನು ಪಡೆದುಕೊಂಡಿದ್ದರೆ, ನಿಯಮಾವಳಿಗಳಲ್ಲಿ ತಿಳಿಸಿರುವ ಇತರ ಅರ್ಹತಾ ಮಾನದಂಡಗಳನ್ನು ಪೂರೈಸುವುದರ ಜೊತೆಗೆ ಭಾರತದಲ್ಲಿ ನೋಂದಣಿ ಮಾಡಿಕೊಳ್ಳಲು ನಿಗದಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಎನ್‌ಎಂಸಿ ತಿಳಿಸಿತ್ತದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು