ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Fact Check: ಪಾಕಿಸ್ತಾನಕ್ಕೆ ಭಾರತದಿಂದ ಉಚಿತ ಲಸಿಕೆ ಪೂರೈಕೆ?

Last Updated 18 ಮಾರ್ಚ್ 2021, 19:30 IST
ಅಕ್ಷರ ಗಾತ್ರ

‘ಭಾರತದ ಮುಂದೆ ಪಾಕಿಸ್ತಾನ ಕೊನೆಗೂ ಮಂಡಿಯೂರಿದೆ. ಭಾರತದಲ್ಲಿ ತಯಾರಾದ ಕೋವಿಡ್ ಲಸಿಕೆಯನ್ನು ಉಚಿತವಾಗಿ ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದೆ. ಹೀಗಾಗಿ ಭಾರತವು 4.5 ಕೋಟಿ ಡೋಸ್ ಲಸಿಕೆಯನ್ನು ಕಳುಹಿಸಿಕೊಟ್ಟಿದೆ’ ಎಂಬರ್ಥದ ಟ್ವೀಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಗವಿ, ಕೊವ್ಯಾಕ್ಸ್, ಸಿಇಪಿಐ, ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್ ಮೊದಲಾದ ಸಂಘಟನೆಗಳು ಬಡ, ಮಧ್ಯಮ ಆದಾಯದ ರಾಷ್ಟ್ರಗಳ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಂಡಿವೆ. ಭಾರತ, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳು ಅಂತರರಾಷ್ಟ್ರೀಯ ಲಸಿಕೆ ಒಕ್ಕೂಟದ ಸದಸ್ಯ ರಾಷ್ಟ್ರಗಳಾಗಿದ್ದು, ಈ ಸಂಘಟನೆಗಳಿಗೆ ಹಣವನ್ನು ದೇಣಿಗೆ ನೀಡಿವೆ. ಇದರ ಭಾಗಿವಾಗಿಯೇ ಹಲವು ರಾಷ್ಟ್ರಗಳಿಗೆ ಉಚಿತ ಲಸಿಕೆ ಸರಬರಾಜಾಗಿದೆ. ಭಾರತದ ಜೊತೆಗೆ ಪಾಕಿಸ್ತಾನಕ್ಕೂ ಈ ವೇದಿಕೆಗಳ ಮೂಲಕ ಉಚಿತ ಲಸಿಕೆ ಸಿಕ್ಕಿದೆ. ಸೀರಂ ಸಂಸ್ಥೆಯ ಕೋವಿಶೀಲ್ಡ್ ಲಸಿಕೆಯನ್ನು ಖರೀದಿಸಿರುವ ಕೊವ್ಯಾಕ್ಸ್‌ ಸಂಘಟನೆಯು, ಅದನ್ನು ಪಾಕಿಸ್ತಾನಕ್ಕೆ ಪೂರೈಸಿದೆ ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT