ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ನಿಮಿತ್ತ ಶುಕ್ರವಾರ ಬೃಹತ್ ಲಸಿಕಾ ಕಾರ್ಯಕ್ರಮ ನಡೆಯಿತು. ಒಂದೇ ದಿನ ಎರಡೂವರೆ ಕೋಟಿ ಜನರಿಗೆ ಲಸಿಕೆ ನೀಡಲಾಯಿತು. ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಅವರು ಲಸಿಕೆ ಕುರಿತು ಮಾಡಿರುವ ಟ್ವೀಟ್ ಚರ್ಚಾಸ್ಪದವಾಗಿದೆ. ‘ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಉಚಿತ ಕೋವಿಡ್ ಲಸಿಕೆಯ ಉಡುಗೊರೆ ನೀಡಿದ್ದಾರೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮಾಂಡವೀಯ ಅವರ ಟ್ವೀಟ್ ತಪ್ಪುದಾರಿಗೆಳೆಯುವ ರೀತಿಯಲ್ಲಿದೆ ಎಂದು ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆ ತಿಳಿಸಿದೆ. ದೇಶದ ಎಲ್ಲರಿಗೂ ‘ಉಚಿತ’ ಲಸಿಕೆ ನೀಡಲಾಗುತ್ತಿಲ್ಲ. ಕೇಂದ್ರ ಸರ್ಕಾರವು ಶೇ 50ರಷ್ಟು ಲಸಿಕೆಯನ್ನು ಉಚಿತವಾಗಿ ನೀಡುತ್ತಿದೆ. ರಾಜ್ಯ ಸರ್ಕಾರಗಳು ಶೇ 25ರಷ್ಟು ಲಸಿಕೆಗಳನ್ನು ತಮ್ಮ ರಾಜ್ಯಗಳಲ್ಲಿ ಉಚಿತವಾಗಿ ನೀಡುತ್ತಿವೆ. ಆದರೆ ಇನ್ನುಳಿದ ಶೇ 25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಮಾರಾಟ ಮಾಡುತ್ತಿವೆ. ಈ ಮಾಹಿತಿ ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿದೆ. ಕೋವಿಶೀಲ್ಡ್ ಅನ್ನು ₹780ಕ್ಕೆ, ಕೋವ್ಯಾಕ್ಸಿನ್ ಅನ್ನು ₹1,410ಕ್ಕೆ ಹಾಗೂ ಸ್ಪುಟ್ನಿಕ್ ಲಸಿಕೆಯನ್ನು ₹1,145 ದರದಲ್ಲಿ ನೀಡಲಾಗುತ್ತಿದೆ. ಹೀಗಾಗಿ ಉಚಿತ ಎಂಬುದು ದಾರಿ ತಪ್ಪಿಸುವ ಹೇಳಿಕೆ ಎಂದು ವೆಬ್‌ಸೈಟ್ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.