ಮಂಗಳವಾರ, ಜನವರಿ 25, 2022
25 °C

Fact check: ಕೋರ್ಟ್‌ಗೆ ಹಾಜರಾಗುವುದನ್ನು ತಪ್ಪಿಸಲು ಆಸ್ಪತ್ರೆಗೆ ದಾಖಲಾದ ಲಾಲು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈರಲ್‌ ಆಗಿರುವ ಲಾಲು ಅವರ ಫೋಟೊ

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಅವರು ಅನಾರೋಗ್ಯದ ಕಾರಣ ನ.26ರಂದು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಬೆನ್ನಲ್ಲೇ, ಲಾಲು  ಅವರು ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಫೋಟೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನ.30ರಂದು ಅವರು ಕೋರ್ಟ್‌ಗೆ ಹಾಜರಾಗಬೇಕಿತ್ತು. ಅದರಿಂದ ತಪ್ಪಿಸಿಕೊಳ್ಳಲು ಅವರು ಅನಾರೋಗ್ಯದ ನಾಟಕ ಆಡುತ್ತಿದ್ದಾರೆ. ಇತ್ತೀಚೆಗಷ್ಟೇ ಜೀಪ್‌ ಓಡಿಸುತ್ತಿದ್ದ ವ್ಯಕ್ತಿಗೆ ವಿನಾಕಾರಣ ಎದೆ ನೋವು ಹೇಗೆ ಕಾಣಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೊಗಳು ಹಳೆಯ ಫೋಟೊಗಳು ಎಂದು ಲಾಜಿಕಲ್‌ ಇಂಡಿಯನ್‌ ವರದಿ ಮಾಡಿದೆ. ಲಾಲು ಅವರು 2018ರಲ್ಲಿ ಮುಂಬೈನಲ್ಲಿ ಚಿಕಿತ್ಸೆ ಪಡೆದುಕೊಂಡು ಪಾಟ್ನಾಗೆ ಮರಳಿದ ಬಳಿಕ ತೆಗೆಯಲಾಗಿರುವ ಫೋಟೊಗಳು ಇವು. ಈ ಫೋಟೊಗಳನ್ನು ಆರ್‌ಜೆಡಿ ತನ್ನ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಿತ್ತು. ನ.26ರಂದು ಲಾಲು ಏಮ್ಸ್‌ಗೆ ದಾಖಲಾಗಿದ್ದಾರೆ. ಆದರೆ ಈ ಫೋಟೊಗಳು ಏಮ್ಸ್‌ ಆಸ್ಪತ್ರೆಯದ್ದಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು