ಶನಿವಾರ, ಡಿಸೆಂಬರ್ 4, 2021
26 °C

fact check: ಕಾಶ್ಮೀರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಲಾಠಿಪ್ರಹಾರ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪೊಲೀಸರು ಜನರ ಮೇಲೆ ಲಾಠಿ ಪ್ರಹಾರ ನಡೆಸುತ್ತಿರುವ, ಜನರು ದಿಕ್ಕೆಟ್ಟು ಓಡುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಇದು ಕಾಶ್ಮೀರದ ದೃಶ್ಯವಾಗಿದ್ದು, ಸೇನಾಪಡೆ ಸಿಬ್ಬಂದಿ ಮುಸ್ಲಿಮರನ್ನು ಗುರಿಯಾಗಿಸಿ ಕ್ರಮ ಜರುಗಿಸಿದ್ದಾರೆ’ ಎಂಬುದಾಗಿ ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಉಲ್ಲೇಖಿಸಿದ್ದಾರೆ. ‘ವಿಡಿಯೊದಲ್ಲಿರುವ ಉರ್ದು ಬರಹಗಳಲ್ಲಿ, ‘ಕಾಶ್ಮೀರದಲ್ಲಿ ಬೃಹತ್ ಸೇನಾ ಕವಾಯತು ನಡೆಸಲು ಸೇನೆ ಉದ್ದೇಶಿಸಿದೆ. ಇದು ಭಯೋತ್ಪಾದನೆ ವಿರುದ್ಧವಾದರೂ, ಇಸ್ಲಾಂ ಅನ್ನು ಗುರಿಯಾಗಿಸಲಾಗಿದೆ’ ಎಂದು ಉಲ್ಲೇಖಿಸಲಾಗಿದೆ.

ಇದು ಕಾಶ್ಮೀರಕ್ಕೆ ಸಂಬಂಧಿಸಿದ ವಿಡಿಯೊ ಅಲ್ಲ ಎಂದು ಲಾಜಿಕಲ್ ಇಂಡಿಯನ್ ವೆಬ್‌ಸೈಟ್ ತಿಳಿಸಿದೆ. 2019ರಲ್ಲಿ ಉತ್ತರ ಪ್ರದೇಶದ ಗೋರಖಪುರದಲ್ಲಿ ಸಿಎಎ, ಎನ್‌ಆರ್‌ಸಿ ವಿರೋಧಿ ಪ್ರತಿಭಟನಕಾರರ ಮೇಲೆ ಪೊಲೀಸರು ನಡೆಸಿದ ಲಾಠಿ ಪ್ರಹಾರದ ದೃಶ್ಯ ಇದು ಎಂದು ತಿಳಿಸಿದೆ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಆಗಿರುವ ಈ ವಿಡಿಯೊದಲ್ಲಿ ಪೊಲೀಸರು ಇರುವುದನ್ನು ಕಾಣಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು