ಶನಿವಾರ, ಸೆಪ್ಟೆಂಬರ್ 25, 2021
24 °C

ಫ್ಯಾಕ್ಟ್ ಚೆಕ್: ಬಡ್ತಿ ಪಡೆದ ವಿದ್ಯಾರ್ಥಿಗಳ ಅಂಕಪಟ್ಟಿಗಳು ಅಮಾನ್ಯ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರೊನಾ ವೈರಸ್ ಹಾವಳಿಯಿಂದ ಈ ಬಾರಿಯ ಶಾಲಾ ಕಾಲೇಜು ತರಗತಿ ಹಾಗೂ ಪರೀಕ್ಷೆಗಳು ಅಸ್ತವ್ಯಸ್ತಗೊಂಡಿವೆ. ಶೈಕ್ಷಣಿಕ ವರ್ಷ ಮುಗಿದ ಕಾರಣ, ಕೆಲವು ರಾಜ್ಯಗಳಲ್ಲಿ 10ನೇ ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರ ಬಡ್ತಿ ನೀಡಿ ಮುಂದಿನ ತರಗತಿಗಳಿಗೆ ಕಳಹಿಸಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟರ್ ವಿದ್ಯಾರ್ಥಿಗಳ ಆತಂಕ ಹೆಚ್ಚಿಸಿದೆ. ‘ಈ ವರ್ಷ 10 ಮತ್ತು 12ನೇ ವರ್ಗಕ್ಕೆ ಬಡ್ತಿ ಪಡೆದ ವಿದ್ಯಾರ್ಥಿಗಳ ಅಂಕಪಟ್ಟಿಗಳು ಸರ್ಕಾರಿ ಉದ್ಯೋಗಗಳಲ್ಲಿ ಮಾನ್ಯತೆ ಪಡೆದಿರುವುದಿಲ್ಲ’ ಎಂದು ಉಲ್ಲೇಖಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಪೋಸ್ಟರ್‌ ಅನ್ನು ಪಿಐಪಿ ಫ್ಯಾಕ್ಟ್ ಚೆಕ್ ತಂಡ ಪರಿಶೀಲಿಸಿದ್ದು, ಇದು ನಕಲಿ ಎಂದು ತಿಳಿಸಿದೆ. ಬಡ್ತಿ ಪಡೆದ ವಿದ್ಯಾರ್ಥಿಗಳ ಅಂಕಪಟ್ಟಿಗಳಿಗೆ ಮಾನ್ಯತೆ ಇರುವುದಿಲ್ಲ ಎಂಬುದಾಗಿ ಸರ್ಕಾರ ಎಲ್ಲಿಯೂ ಘೋಷಿಸಿಲ್ಲ. ಇಂತಹ ದಾರಿ ತಪ್ಪಿಸುವ ನಕಲಿ ಸಂದೇಶಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು