ಮಂಗಳವಾರ, ನವೆಂಬರ್ 24, 2020
21 °C

Fact Check | ಭಾರತದಲ್ಲಿ ಕೋವಿಡ್ ಲಸಿಕೆ ಬಿಡುಗಡೆಯಾಗಿದೆ ಎಂಬ ಸಂದೇಶ ಸುಳ್ಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕೋವಿಡ್‌ನಿಂದ ತತ್ತರಿಸಿರುವ ಜನರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಭಾರತದಲ್ಲಿ ಕೋವಿಡ್ ಲಸಿಕೆ ಬಿಡುಗಡೆಯಾಗಿದೆ. ಲಸಿಕೆ ಬೇಕಾದವರು ತಮ್ಮ ಮೊಬೈಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಇದಕ್ಕಾಗಿ ಸಿದ್ಧಪಡಿಸಿರುವ ಆ್ಯಪ್‌ ಮೂಲಕವೇ ನೋಂದಣಿ ಮಾಡಿಕೊಳ್ಳಬೇಕು’ – ಎಂಬುದಾಗಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ್ಯಪ್‌ ಲಿಂಕ್ ಸಹ ನೀಡಲಾಗಿದ್ದು, ಇದು ನಿಜವೋ, ಸುಳ್ಳೋ ಎಂದು ತಿಳಿಯದೆ ಜನರು ಗೊಂದಲಕ್ಕೆ ಸಿಲುಕಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿರುವ ಸಂದೇಶ ಸುಳ್ಳು ಎಂದು ಪಿಐಬಿ ಫ್ಯಾಕ್ಟ್ ಚೆಕ್ ತಿಳಿಸಿದೆ. ಭಾರತದಲ್ಲಿ ಈವರೆಗೆ ಕೋವಿಡ್ ಲಸಿಕೆ ಬಿಡುಗಡೆಯಾಗಿಲ್ಲ. ಹತ್ತಾರು ಸಂಸ್ಥೆಗಳು ಇನ್ನೂ ಕ್ಲಿನಿಕಲ್ ಪ್ರಯೋಗದಲ್ಲಿ ತೊಡಗಿವೆಯೇ ವಿನಾ ಯಾವ ಲಸಿಕೆಯೂ ಸದ್ಯಕ್ಕೆ ಬಳಕೆಗೆ ಲಭ್ಯವಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು