Fact Check: ರಸ್ತೆ ಬಂದ್ ಮಾಡಿ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ?

ರಸ್ತೆಯನ್ನು ಬಂದ್ ಮಾಡಿ, ಸಾವಿರಾರು ಮುಸ್ಲಿಮರು ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿದೆ. ತಾರೆಕ್ ಫತಾಹ್ ಎಂಬುವರು ಟ್ವಿಟರ್‌ನಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ‘ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಪ್ರಾರ್ಥನೆ ಮಾಡಲಾಗುತ್ತಿದೆ. ವಾಹನಗಳ ಮೇಲೂ ನಮಾಜ್ ಮಾಡಲಾಗುತ್ತಿದೆ’ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಚರ್ಚಿಸುತ್ತಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಜನವಸತಿ ಪ್ರದೇಶ ಸಮೀಪದ ಬಯಲಿನಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದನ್ನು ಹಿಂದೂಪರ ಸಂಘಟನೆಗಳು ಆಕ್ಷೇಪಿಸಿದ್ದು ಇತ್ತೀಚೆಗೆ ಸುದ್ದಿಯಾಗಿತ್ತು.
ಈ ಚಿತ್ರ ಬಾಂಗ್ಲಾದೇಶದ ಬಿಶ್ವ ಇಜ್ತೆಮಾ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಪ್ರತೀ ವರ್ಷವೂ ಗಾಜಿಪುರದ ಟೊಂಗಿ ಎಂಬಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಮುಸ್ಲಿಮರು ಭಾಗಿಯಾಗಿ ಪ್ರಾರ್ಥನೆ ಸಲ್ಲಿಸುತ್ತಾರೆ. ಚಿತ್ರದಲ್ಲಿರುವ ವಾಹನಗಳು, ಮಳಿಗೆಗಳ ಹೆಸರು ಮೊದಲಾದವನ್ನು ಪರಿಶೀಲಿಸಿದಾಗ, ವೈರಲ್ ಆಗಿರುವ ಚಿತ್ರಕ್ಕೂ ಭಾರತಕ್ಕೂ ಸಂಬಂಧವಿಲ್ಲ ಎಂಬುದು ತಿಳಿದುಬಂದಿದೆ ಎಂದು ವೆಬ್‌ಸೈಟ್ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.