ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Fact Check| ರೈಲ್ವೆಯಿಂದ ನಿರುದ್ಯೋಗಿ ಯುವಕರಿಗೆ ನಿಜಕ್ಕೂ ಸಿಹಿ ಸುದ್ದಿ ಬಂತೇ?

Last Updated 7 ಫೆಬ್ರುವರಿ 2021, 17:39 IST
ಅಕ್ಷರ ಗಾತ್ರ

ಕೋವಿಡ್ ಸಕ್ರಿಯ ಪ್ರಕರಣಗಳು ಹಿಂದೆ ಸರಿಯುತ್ತಿದ್ದಂತೆ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಉದ್ಯೋಗಾವಕಾಶಗಳ ಬಾಗಿಲು ಪುನಃ ತೆರೆಯಲಾರಂಭಿಸಿದೆ. ಕೇಂದ್ರ ರೈಲ್ವೆ ಸಚಿವಾಲಯವು ನಿರುದ್ಯೋಗಿ ಯುವಜನತೆಗೆ ಸಿಹಿ ಸುದ್ದಿ ನೀಡಿದೆ. ಇಲಾಖೆಯಲ್ಲಿ ಖಾಯಿಲಿರುವ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತ ಪ್ರಕಟಣೆ ಪತ್ರದ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.

ರೈಲ್ವೆ ಇಲಾಖೆ ಉದ್ಯೋಗಕ್ಕೆ ಆಹ್ವಾನ ನೀಡಿದೆ ಎನ್ನಲಾದ ಪತ್ರದ ಸತ್ಯಾಸತ್ಯಾತೆಯನ್ನು ಪಿಐಬಿ ಫ್ಯಾಕ್ಟ್ ಚೆಕ್ ಪರಿಶೀಲನೆ ನಡೆಸಿದೆ. ಇಲಾಖೆಯನ್ನು ಸಂಪರ್ಕಿಸಿದಾಗ, ಇಂತಹ ಪ್ರಕಟಣೆಯನ್ನು ನೀಡಿಲ್ಲ ಎಂಬ ಉತ್ತರ ಸಿಕ್ಕಿದೆ. ಇದೊಂದು ದಾರಿ ತಪ್ಪಿಸುವ ಯತ್ನವಾಗಿದ್ದು, ನಿರುದ್ಯೋಗಿಗಳು ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT