ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧೂಮಪಾನಿಗಳಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ಕಡಿಮೆಯೇ?

Last Updated 18 ಮೇ 2021, 19:30 IST
ಅಕ್ಷರ ಗಾತ್ರ

‘ಧೂಮಪಾನಿಗಳಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ಕಡಿಮೆ. ಅವರಿಗೆ ಕೋವಿಡ್ ಬರುವ ಸಾಧ್ಯತೆ ಕಡಿಮೆ. ಧೂಮಪಾನದಿಂದ ಶ್ವಾಸನಾಳ ಮತ್ತು ಶ್ವಾಸಕೋಶದಲ್ಲಿ ಒಂದು ರೀತಿಯ ಲೋಳೆ ಕಟ್ಟಿಕೊಂಡಿರುತ್ತದೆ. ಕೊರೊನಾ ವೈರಾಣು ಈ ಲೋಳೆಗೆ ಅಂಟಿಕೊಳ್ಳುವ ಕಾರಣ, ಅದು ಶ್ವಾಸಕೋಶದ ಜೀವಕೋಶಗಳನ್ನು ಪ್ರವೇಶಿಸುವುದಿಲ್ಲ ಎಂದು ಕೇಂದ್ರ ಸರ್ಕಾರದ ವೈಜ್ಞಾನಿಕ ಸಂಶೋಧನಾ ಸಂಸ್ಥೆ ಸಿಎಸ್‌ಐಆರ್‌ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ’ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಹೆಚ್ಚು ಧೂಮಪಾನ ಮಾಡುವುದರಿಂದ ಕೋವಿಡ್‌ ತಡೆಯಬಹುದು’ ಎಂಬ ಪೋಸ್ಟರ್ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ಸಿಎಸ್‌ಐಆರ್ ನಡೆಸಿರುವ ಸೆರೊ ಸರ್ವೆಯ ವರದಿಯಲ್ಲಿ ಇಂತಹ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಧೂಮಪಾನದಿಂದ ಮತ್ತು ಕೇವಲ ಸಸ್ಯಾಹಾರ ಸೇವನೆಯಿಂದ ಕೋವಿಡ್‌ ಹರಡುವುದನ್ನು ತಡೆಯಬಹುದು ಎಂಬುದು ಸಾಬೀತಾಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸಿಎಸ್‌ಐಆರ್ ಯಾವುದೇ ಪತ್ರಿಕಾ ಪ್ರಕಟಣೆ ಹೊರಡಿಸಿಲ್ಲ. ಇಂತಹ ಸುಳ್ಳುಸುದ್ದಿಗಳಿಗೆ ಕಿವಿಗೊಡಬೇಡಿ. ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿ. ಅಂತರ ಕಾಯ್ದುಕೊಳ್ಳಿ, ಸ್ಯಾನಿಟೈಸರ್ ಬಳಸಿ ಮತ್ತು ಲಸಿಕೆ ಹಾಕಿಸಿಕೊಳ್ಳಿ’ ಎಂದು ಪಿಐಬಿ ತನ್ನ ಫ್ಯಾಕ್ಟ್‌ಚೆಕ್‌ನಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT