ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಷ್ಯವೇತನ ಅಡಿ ಯಾವುದೇ ಹೊಸ ಯೋಜನೆ ಜಾರಿಗೆ ತಂದಿಲ್ಲ

Last Updated 10 ಜೂನ್ 2020, 19:30 IST
ಅಕ್ಷರ ಗಾತ್ರ
ADVERTISEMENT
""

ರಾಷ್ಟ್ರೀಯ ಶಿಷ್ಯವೇತನ–2020ರ ಅಡಿಯಲ್ಲಿ ದೇಶದ ಪ್ರತಿಯೊಬ್ಬ ಕಾಲೇಜು ವಿದ್ಯಾರ್ಥಿಗೂ ಕೇಂದ್ರ ಸರ್ಕಾರದಿಂದ ₹ 10 ಸಾವಿರ ಶಿಷ್ಯವೇತನ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಅಧಿಕೃತ ನ್ಯಾಷನಲ್‌ ಸ್ಕಾಲರ್‌ಷಿಪ್‌ ಪೋರ್ಟಲ್‌ನಲ್ಲಿ ತಕ್ಷಣ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಈ ಸೌಲಭ್ಯವನ್ನು ಪಡೆಯಬಹುದು ಎಂಬ ಸಂದೇಶವು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಹೆಸರು ನೋಂದಾಯಿಸಿಕೊಳ್ಳಲು ವೆಬ್‌ಸೈಟ್‌ನ ವಿಳಾಸವನ್ನೂ ಆ ಸಂದೇಶದಲ್ಲಿ ನೀಡಲಾಗಿದೆ.

ಇದೊಂದು ಸುಳ್ಳು ಸುದ್ದಿಯಾಗಿದ್ದು, ಕೇಂದ್ರ ಸರ್ಕಾರವು ಇಂತಹ ಯಾವುದೇ ಯೋಜನೆಯನ್ನು ಅನುಷ್ಠಾನಕ್ಕೆ ತಂದಿಲ್ಲ. ಅಲ್ಲದೆ, ಶಿಷ್ಯವೇತನ ನೀಡಲು ನ್ಯಾಷನಲ್‌ ಸ್ಕಾಲರ್‌ಷಿಪ್‌ ಹೆಸರಿನಲ್ಲಿ ಯಾವುದೇ ವೆಬ್‌ಸೈಟ್‌ಅನ್ನು ಕೇಂದ್ರ ಸರ್ಕಾರ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಓಡಾಡಿದ ಈ ಸಂದೇಶದ ಕುರಿತು ಪಿಐಬಿ ಸಹ ಪರಿಶೀಲನೆ ನಡೆಸಿದ್ದು, ಇದೊಂದು ಆಧಾರರಹಿತ ಮಾಹಿತಿ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT