ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಅದಕ್ಕಿನ್ನೂ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ರೈತರ ಹೋರಾಟಕ್ಕೆ ಬೆಂಬಲ ನೀಡುವವರ ಸಂಖ್ಯೆ ಹೆಚ್ಚುತ್ತಿದೆ. ರೈತರನ್ನು ಬೆಂಬಲಿಸುವ ಉದ್ದೇಶದಿಂದ ಭಾರತೀಯ ಸೇನೆಯ 25,000 ಸೈನಿಕರು ತಮಗೆ ನೀಡಲಾದ ಶೌರ್ಯಚಕ್ರ ಪದಕಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ ಎಂದು ತೆಲುಗು ಪತ್ರಿಕೆಯೊಂದು ವರದಿ ಮಾಡಿದೆ.

ರೈತರ ಪ್ರತಿಭಟನೆಗೆ ಹಲವು ಸಮುದಾಯಗಳು ಬೆಂಬಲ ನೀಡಿರುವುದು ನಿಜ. ಆದರೆ ಸೈನಿಕರು ಶೌರ್ಯಚಕ್ರ ಪದಕಗಳನ್ನು ವಾಪಸ್ ಮಾಡಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ತಿಳಿಸಿದೆ. 1956ರಿಂದ 2019ರವರೆಗೆ 2,048 ಯೋಧರಿಗೆ ಮಾತ್ರ ಈ ಪುರಸ್ಕಾರ ನೀಡಲಾಗಿದೆ ಎಂಬ ಮಾಹಿತಿಯನ್ನೂ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.