ಮಂಗಳವಾರ, ಸೆಪ್ಟೆಂಬರ್ 28, 2021
25 °C

Fact Check| ಉತ್ತರ ಪ್ರದೇಶದಲ್ಲಿ 50 ತುಂಬಿದ ನೌಕರರಿಗೆ ಕಡ್ಡಾಯ ನಿವೃತ್ತಿ?

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

50 ವರ್ಷ ತುಂಬಿದ ಸರ್ಕಾರಿ ನೌಕರರಿಗೆ ಕಡ್ಡಾಯ ನಿವೃತ್ತಿ ಘೋಷಿಸಿ ಉತ್ತರ ಪ್ರದೇಶ ಸರ್ಕಾರವು ಆದೇಶಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಎಲ್ಲ ಇಲಾಖೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ‘ಪಿಂಚಣಿ ಇಲ್ಲದ ಉದ್ಯೋಗಿ 50ನೇ ವಯಸ್ಸಿನಲ್ಲಿ ನಿವೃತ್ತರಾದರೆ, ಪಿಂಚಣಿ ಹೊಂದಿರುವ ಸಂಸದರು, ಶಾಸಕರು ಎಷ್ಟು ವರ್ಷಗಳಲ್ಲಿ ನಿವೃತ್ತರಾಗುತ್ತಾರೆ’ ಎಂದು ಫೇಸ್‌ಬುಕ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

50ನೇ ವರ್ಷಕ್ಕೆ ನಿವೃತ್ತಿ ಎಂಬುದು ದಾರಿ ತಪ್ಪಿಸುವ ಸುದ್ದಿ ಎಂದು ಲಾಜಿಕಲ್ ಇಂಡಿಯನ್ ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಭ್ರಷ್ಟಾಚಾರದ ಆರೋಪವಿರುವ 50 ವರ್ಷ ತುಂಬಿದ ಪೊಲೀಸರನ್ನು ಗುರುತಿಸಿ, ಅವರಿಗೆ ಕಡ್ಡಾಯ ನಿವೃತ್ತಿ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ನೌಕರರಿಗೂ ಅನ್ವಯವಾಗುವುದಿಲ್ಲ ಎಂದು ಸರ್ಕಾರದ ಸುತ್ತೋಲೆ ಸ್ಪಷ್ಟಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು