ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್‌ಚೆಕ್‌: ಪೊಲೀಸ್‌ ಮುಖದ ಮೇಲೆ ಮಹಿಳೆಯೊಬ್ಬರು ಉಗುಳಿದ ವಿಡಿಯೊ

Last Updated 10 ಜುಲೈ 2022, 18:58 IST
ಅಕ್ಷರ ಗಾತ್ರ

ಮಹಿಳಾ ಪೊಲೀಸ್‌ ಸಿಬ್ಬಂದಿಯ ಮುಖದ ಮೇಲೆ ಮಹಿಳೆಯೊಬ್ಬರು ಉಗುಳಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ಇರುವವರುಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌. ಕರ್ತವ್ಯದಲ್ಲಿದ್ದ ಮಹಿಳೆಯ ಮೇಲೆ ತೀಸ್ತಾ ಉಗುಳಿದ ವಿಡಿಯೊವನ್ನು ಯಾವ ಮಾಧ್ಯಮವೂ ತೋರಿಸುವುದಿಲ್ಲ ಎಂದು ವಿಡಿಯೊ ಜೊತೆ ವಿರವಣೆ ನೀಡಲಾಗಿದೆ. ಗುಜರಾತ್‌ನಲ್ಲಿ2002ರಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಪ್ರಧಾನಿ ನರೇಂದ್ರ ಮೋದಿ ಮತ್ತಿತರರ ವಿರುದ್ಧ ತೀಸ್ತಾ ಮತ್ತು ಇತರರು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂಬ ಆರೋಪದ ಮೇಲೆ ತೀಸ್ತಾ ಅವರನ್ನು ಗುಜರಾತ್‌ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

ಈ ವಿಡಿಯೊ ಜೊತೆ ನೀಡಲಾಗಿರುವ ಮಾಹಿತಿ ಸುಳ್ಳು ಎಂದು ‘ದಿ ಲಾಜಿಕಲ್‌ ಇಂಡಿಯನ್‌’ ಫ್ಯಾಕ್ಟ್‌ಚೆಕ್‌ ಪ್ರಕಟಿಸಿದೆ. ಈ ವಿಡಿಯೊದಲ್ಲಿ ಇರುವವರು ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನೆಟ್ಟಾ ಡಿ’ಸೋಜ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆ ವೇಳೆ ನೆಟ್ಟಾ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಾಗ ಅವರು ಅನುಚಿತವಾಗಿ ವರ್ತಿಸಿದ್ದರು ಎಂದು ಹೇಳಲಾಗಿದೆ. ಈ ಘಟನೆಗೆ ಸಂಬಂಧಿಸಿದ ವರದಿಗಳನ್ನು ಎಎನ್‌ಐ ಸುದ್ದಿಸಂಸ್ಥೆ ಮತ್ತು ಇತರ ವೆಬ್‌ಸೈಟ್‌ಗಳು 2022ರ ಜೂನ್‌ 21ರಂದು ಪ್ರಕಟಿಸಿದ್ದವು ಎಂದು ಫ್ಯಾಕ್ಟ್‌ಚೆಕ್‌ನಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT