ಶುಕ್ರವಾರ, ಡಿಸೆಂಬರ್ 2, 2022
20 °C

Fact Check: ಬೆಳಗಾವಿ ವೃತ್ತದಲ್ಲಿ ಪೊಲೀಸ್ ಅಧಿಕಾರಿ ಥಳಿಸಿದ ವಿಡಿಯೊ ನೈಜವಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿಯ ವಾಹನ ಹಾಗೂ ಜನದಟ್ಟಣೆಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯೊಬ್ಬರು ಮತ್ತೊಬ್ಬ ವ್ಯಕ್ತಿಯನ್ನು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಜನರು ನೋಡುತ್ತಿದ್ದರೂ, ಆ ವ್ಯಕ್ತಿ ಥಳಿಸುವುದನ್ನು ಮುಂದುವರಿಸುತ್ತಾರೆ. ಯಾರೂ ಮಧ್ಯಪ್ರವೇಶಿಸುವುದಿಲ್ಲ. ‘ನಡುರಸ್ತೆಯಲ್ಲಿ ಜನರ ಮೇಲೆ ಪೊಲೀಸರು ದರ್ಪ ಪ್ರದರ್ಶಿಸುತ್ತಿದ್ದಾರೆ’ ಎಂಬುದಾಗಿ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. 

ಈ ವಿಡಿಯೊ ‘ಹೊಯ್ಸಳ’ ಹೆಸರಿನ ಸಿನಿಮಾಕ್ಕಾಗಿ ಚಿತ್ರೀಕರಣ ನಡೆಸುತ್ತಿದ್ದಾಗ ಸೆರೆಹಿಡಿದದ್ದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಿಡಿಯೊದಲ್ಲಿರುವ ಘಟನೆ ನೈಜವಲ್ಲ. ವಿಡಿಯೊದಲ್ಲಿರುವ ವ್ಯಕ್ತಿ ಪೊಲೀಸ್ ಅಧಿಕಾರಿಯೂ ಅಲ್ಲ ಎಂದು ಬೆಳಗಾವಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಪೊಲೀಸ್ ಫ್ಯಾಕ್ಟ್‌ಚೆಕ್ ಜಾಲತಾಣವೂ ಇದನ್ನು ಸ್ಪಷ್ಟಪಡಿಸಿದೆ. ಪೊಲೀಸರ ಬಗ್ಗೆ ನಕಾರಾತ್ಮಕ ಭಾವನೆ ಬರುವಂತೆ ಜನರು ಮಾತನಾಡುತ್ತಿದ್ದು, ವಿಡಿಯೊ ಹಂಚಿಕೊಳ್ಳಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು