ಸೋಮವಾರ, ಮಾರ್ಚ್ 8, 2021
29 °C
ಮುಖ್ಯಮಂತ್ರಿಗೆ ಮನವಿ ನೀಡಿದ ಹೊನ್ನೂರು ಪ್ರಕಾಶ್‌

ಕೃಷಿ ಆಯೋಗ ರಚಿಸಲು ರೈತರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹನೂರು: ಕೃಷಿ ಆಯೋಗ ರಚಿಸಿ ರೈತರಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಮಲೆಮಹದೇಶ್ವರ ತಪ್ಪಲಿನಲ್ಲಿರುವ ಪೋಡುಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಅರಿಸಿನ, ಬಾಳೆ ಹಾಗೂ ಟೊಮೆಟೊ ಸಂಸ್ಕರಣಾ ಘಟಕ ಸ್ಥಾಪಿಸಿ, ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಚಂಗಡಿ ಗ್ರಾಮದ ಸ್ಥಳಾಂತರವನ್ನು ತ್ವರಿತಗತಿಯಲ್ಲಿ ಮಾಡಬೇಕು. ಯಳಂದೂರು ತಾಲ್ಲೂಕಿನ ಎಲ್ಲಾ ಕೆರೆಗಳಲ್ಲಿನ ಹೂಳೆತ್ತಿಸಿ ನೀರು ತುಂಬಿಸಬೇಕು. ಕೆರೆ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದ ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು. ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ವಲಯದಲ್ಲಿ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಸೃಷ್ಟಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಶೀತಲೀಕರಣ ಘಟಕ ನಿರ್ಮಿಸಬೇಕು. ಇಸ್ರೇಲ್‌ಗೆ ಭೇಟಿ ನೀಡಲು ರೈತರಿಗೆ ಸಹಾಯಧನ ನೀಡಬೇಕು. ಸಂತೇಮರಹಳ್ಳಿಯಲ್ಲಿರುವ ರೇಷ್ಮೆ ಮೊಟ್ಟೆ ಚಾಕಿ ಸಾಕಾಣಿಕೆ ಕಟ್ಟಡವನ್ನು ಗುತ್ತಿಗೆ ಆಧಾರದ ಮೇಲೆ ಸಾವಯವ ಬೆಳೆಗಾರರ ಸಹಕಾರ ಸಂಘಕ್ಕೆ ನೀಡಬೇಕು. ಅರಣ್ಯ ಆಧಾರಿತ ಕೃಷಿಯನ್ನು ಜಾರಿಗೆ ತರಬೇಕು. ಮಲೆಮಹದೇಶ್ವರ ಬೆಟ್ಟದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು. ಮಲೆಮಹದೇಶ್ವರ ವನ್ಯಧಾಮ, ಬಿಆರ್‌ಟಿ ಹುಲಿ ರಕ್ಷಿತಾರಣ್ಯ ಹಾಗೂ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಅನಧಿಕೃತವಾಗಿ ತಲೆಎತ್ತಿರುವ ಹೋಂ ಸ್ಟೇಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ, ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಾ. ಗುರುಪ್ರಸಾದ್, ಸಂಘಟನಾ ಕಾರ್ಯದರ್ಶಿ ಹೊನ್ನೂರು ಬಸವಣ್ಣ, ಜಿಲ್ಲಾ ಖಜಾಂಚಿ ಅಂಬಳೆ ಶಿವಕುಮಾರಸ್ವಾಮಿ, ಹನೂರು ಘಟಕದ ಕಾರ್ಯಾಧ್ಯಕ್ಷ ಪಿ. ಮಾದೇಶ್, ಅಧ್ಯಕ್ಷ ಚಂಗಡಿ ಕರಿಯಪ್ಪ, ಶಾಂತಕುಮಾರ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.