ಶುಕ್ರವಾರ, ಅಕ್ಟೋಬರ್ 18, 2019
27 °C

ರೈತ ದಸರಾಗೆ ಪ್ರತಿಭಟನೆ ಬಿಸಿ

Published:
Updated:

ಚಾಮರಾಜನಗರ: ಗುರುವಾರ ನಡೆಯಲಿರುವ ರೈತ ದಸರಾಗೆ ಪ್ರತಿಭಟನೆಯ ಬಿಸಿ ಎದುರಾಗಿದೆ.

ರೈತರ ಸಂಕಷ್ಟಗಳಿಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರುವ ಸೇನೆಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ರೈತ ದಸರಾದ ಅಂಗವಾಗಿ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದ ವರೆಗೆ ಎತ್ತಿನ ಬಂಡಿಗಳ ಮೆರವಣಿಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲು ರೈತ ಮುಖಂಡರು ನಿರ್ಧಾರಿಸಿದ್ದಾರೆ.

‘ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರ ನೀಡಿಲ್ಲ. ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ಸುಳ್ವಾಡಿ ವಿಷ ಪ್ರಸಾದ ಸಂತ್ರಸ್ತರಿಗೆ ಇನ್ನೂ ಪರಿಹಾರ ನೀಡಿಲ್ಲ. ರೈತರನ್ನು ಗೂಂಡಾಗಳು ಎಂದು ಕರೆದ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದನ್ನೆಲ್ಲ ಖಂಡಿಸಿ ನಾವು ಪ್ರತಿಭಟನೆ ನಡೆಸುತ್ತೇವೆ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

 

Post Comments (+)