ಗಿರಿಜನರಿಗೆ ರಸಗೊಬ್ಬರ, ಬಿತ್ತನೆ ಬೀಜ ವಿತರಣೆ

7
ಚಾಮರಾಜನಗರ ತಾಲ್ಲೂಕು ಪಂಚಾಯಿತಿ ವಿಶೇಷ ಘಟಕ ಯೋಜನೆ

ಗಿರಿಜನರಿಗೆ ರಸಗೊಬ್ಬರ, ಬಿತ್ತನೆ ಬೀಜ ವಿತರಣೆ

Published:
Updated:
Deccan Herald

ಚಾಮರಾಜನಗರ: ತಾಲ್ಲೂಕು ಪಂಚಾಯಿತಿ ವಿಶೇಷ ಘಟಕ ಯೋಜನೆಯಡಿ ಗೊಂಚಲ ಗ್ರಾಮ ಯೋಜನೆಗೆ ಆಯ್ಕೆಯಾಗಿರುವ ಎತ್ತೇಗೌಡನ ದೊಡ್ಡಿಯ 36 ಗಿರಿಜನ ಫಲಾನುಭವಿಗಳಿಗೆ ₹ 5,000 ಮೌಲ್ಯದ ರಸಗೊಬ್ಬರ, ಬೀನ್ಸ್ ಬಿತ್ತನೆ ಬೀಜ ಹಾಗೂ ಔಷಧಿಯನ್ನು ವಿತರಣೆ ಮಾಡಲಾಯಿತು.

ಪಟ್ಟಣದ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯ ಪಿ. ಕುಮಾರನಾಯಕ್‌, ‘ಗಿರಿಜನರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಯಲ್ಲಿ ಸಕ್ರಿಯರಾದರೆ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬಹುದು’ ಎಂದರು.

‘ಗಿರಿಜನರು ಕಿರು ಅರಣ್ಯ ಉತ್ಪನ್ನಗಳನ್ನು ನೆಚ್ಚಿಕೊಂಡು ಜೀವನ ನಡೆಸುವುದು ಕಷ್ಟ. ಕಾಡಿನೊಳಗೆ ವನ್ಯಪ್ರಾಣಿಗಳೊಂದಿಗೆ ಸಂಘರ್ಷಕ್ಕೆ ಇಳಿಯದೆ, ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿ ಎಂಬ ಉದ್ದೇಶದಿಂದ ಸರ್ಕಾರ ಈ ಯೋಜನೆ ಜಾರಿ ಮಾಡಿದೆ’ ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯಿಂದ ಆರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಬೀನ್ಸ್‌ ಬಿತ್ತನೆ ಮಾಡಿ ಹೆಚ್ಚಿನ ಇಳುವರಿ ಪಡೆದುಕೊಳ್ಳಲು ಅನುಕೂಲವಾಗುವಂತೆ ರಸಗೊಬ್ಬರ, ಔಷಧಿ, ಬಿತ್ತನೆ ಬೀಜವನ್ನು ವಿತರಿಸಲಾಗಿದೆ ಎಂದು ಹೇಳಿದರು.

ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಸಹಾಯಕ ತೋಟಗಾರಿಕೆ ಅಧಿಕಾರಿ ಮಂಜುಳಾ, ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ನಂಜೇಗೌಡ, ಮಹದೇವಮ್ಮ, ಗಣೇಶನಾಯಕ, ಜಡೇಯಪ್ಪ ಇದ್ದರು. 
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !