ವಾಟ್ಸ್‌ಆ್ಯಪ್‌ ಗ್ರೂಪ್ ಸದಸ್ಯರ ವಿರುದ್ಧ ಎಫ್‌ಐಆರ್‌

7

ವಾಟ್ಸ್‌ಆ್ಯಪ್‌ ಗ್ರೂಪ್ ಸದಸ್ಯರ ವಿರುದ್ಧ ಎಫ್‌ಐಆರ್‌

Published:
Updated:

ಬೆಂಗಳೂರು: ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಸಂದೇಶಗಳನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಕಳುಹಿಸಿದ್ದ ಆರೋಪದಡಿ, ಗ್ರೂಪ್‌ನ ಮೂವರು ಸದಸ್ಯರ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ವೈಟ್‌ಫೀಲ್ಡ್‌ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ನಿವಾಸಿಯಾದ ಮಹಿಳೆ ದೂರು ನೀಡಿದ್ದರು. ಅದರನ್ವಯ ಸ್ಥಳೀಯ ನಿವಾಸಿಗಳಾದ ಬುರ್ಹಾನ್ ಖಾಲಿದ್, ವಿಜಯ್ ತ್ರಿವೇದಿ ಹಾಗೂ ಸುಯಾಶ್ ತಿವಾರಿ ವಿರುದ್ಧ ‍ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ಥಳೀಯ ನಿವಾಸಿಗಳು, ಪರಸ್ಪರ ಅಭಿಪ್ರಾಯ ವಿನಿಮಯಕ್ಕೆ ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿಕೊಂಡಿದ್ದಾರೆ. ಅದರಲ್ಲಿ 250 ಮಂದಿ ಸದಸ್ಯರಿದ್ದಾರೆ. ಅದೇ ಗ್ರೂಪ್‌ನಲ್ಲೇ ಆರೋಪಿಗಳು, ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಸಂದೇಶ ಕಳುಹಿಸಿದ್ದರು. ಜೊತೆಗೆ, ಸಾಮಾಜಿಕ ಜಾಲತಾಣಗಳಲ್ಲೂ ಆ ಸಂದೇಶ ಹರಿಬಿಟ್ಟಿದ್ದಾರೆ’ ಎಂದರು.

‘ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಬೇಕು. ಅವರ ಮೊಬೈಲ್‌ಗಳನ್ನು ಜಪ್ತಿ ಮಾಡಿ ವಿಧಿವಿಜ್ಞಾನ ಪ್ರಯೋಗಾಲ
ಯಕ್ಕೆ ಕಳುಹಿಸಿ ವರದಿ ಪಡೆಯಬೇಕು’ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !