ನಾಯಿ ಕಡಿತ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್

ಬೆಂಗಳೂರು: ನೀಲಸಂದ್ರ ಸಮೀಪದ ರೋಸ್ ಗಾರ್ಡನ್ನಲ್ಲಿ ನಾಲ್ಕೂವರೆ ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದ ಪ್ರಕರಣ ಸಂಬಂಧ, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
‘ನೀಲಸಂದ್ರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅವುಗಳ ಹತೋಟಿಗೆ ಬಿಬಿಎಂಪಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಅವರ ನಿರ್ಲಕ್ಷ್ಯವೇ ಘಟನೆಗೆ ಕಾರಣ’ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.
ಅಶೋಕನಗರ ಪೊಲೀಸರು, ‘ಪ್ರಾಣಿಗಳ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ (ಐಪಿಸಿ 289) ಆರೋಪದಡಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದರು.
‘ಬಾಲಕಿಯ ಪೋಷಕರು, ಕೂಲಿ ಕಾರ್ಮಿಕರು. ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಮನೆ ಮುಂದೆ ಆಟವಾಡುತ್ತಿದ್ದ ವೇಳೆಯೇ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದವು. ಬಾಲಕಿಯ ಕೆನ್ನೆ, ಕಣ್ಣಿಗೆ ಕಚ್ಚಿ ಗಾಯಗೊಳಿಸಿದ್ದವು. ಬಾಲಕಿಯ ಕಿರುಚಾಟ ಕೇಳಿ ಸಹಾಯಕ್ಕೆ ಹೋಗಿದ್ದ ಸ್ಥಳೀಯರು ನಾಯಿಗಳನ್ನು ಓಡಿಸಿದ್ದರು’ ಎಂದರು.
‘ಬಾಲಕಿಗೆ ಚಿಕಿತ್ಸೆ ಕೊಡಿಸ ಲಾಗಿದೆ. ಆದರೆ, ಆಕೆಯ ಎಡಗಣ್ಣು ಕಾಣಿಸುತ್ತಿಲ್ಲ. ಮುಖದ ಮೇಲಿನ ಗಾಯವೂ ಗುಣವಾಗಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದರು.
ಇದನ್ನೂ ಓದಿ... ಬೀದಿ ನಾಯಿಗಳಿಗೆ ಬಾಲಕ ಬಲಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.