ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ

7

ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ

Published:
Updated:

ಬೆಂಗಳೂರು: ತುಮಕೂರು ರಸ್ತೆಯಲ್ಲಿರುವ (ರಾಷ್ಟ್ರೀಯ ಹೆದ್ದಾರಿ–4) ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ (ಬಿಐಇಸಿ) ಬಳಿ ಸೋಮವಾರ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

‘ಬೆಳಿಗ್ಗೆ 8.30 ಗಂಟೆ ಸುಮಾರಿಗೆ ಬಸ್ಸಿನ ಎಂಜಿನ್‌ನಿಂದ ಹೊಗೆ ಬಂದು ನಂತರ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ಗಮನಿಸಿದ ಚಾಲಕ, ಬಸ್‌ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ನೆಲಮಂಗಲ ಟೋಲ್ ಸಿಬ್ಬಂದಿ, ಬೆಂಕಿ ನಂದಿಸಲು ನೆರವಾದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.

‘ಎಂಜಿನ್‌ಗೆ ಹೊತ್ತಿಕೊಂಡಿದ್ದ ಬೆಂಕಿ, ಇಡೀ ಬಸ್‌ ಆವರಿಸುವ ಸಾಧ್ಯತೆ ಇತ್ತು. ಬಸ್ಸಿನಲ್ಲಿ 12 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದರು.

ರಸ್ತೆಯಲ್ಲೇ ಬಸ್‌ ನಿಂತಿದ್ದರಿಂದ ಕೆಲವು ಗಂಟೆಯವರೆಗೆ ಸಂಚಾರ ದಟ್ಟಣೆ ಉಂಟಾಯಿತು. ಘಟನೆ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !