ಭಾನುವಾರ, ಸೆಪ್ಟೆಂಬರ್ 26, 2021
25 °C

ರಾಷ್ಟ್ರಧ್ವಜಕ್ಕೆ ಅಗೌರವ: ಯುವಕರಿಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಯುವಕರಿಬ್ಬರನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಜಾಫರ್ ಹಾಗೂ ರಾಬಿನ್ ಸೌದ್ ಬಂಧಿತರು.

‘ರಾಘವೇಂದ್ರ ಬಡಾವಣೆಯಲ್ಲಿರುವ ‘ಶ್ರೀನಿವಾಸ್ ರೆಸಿಡೆನ್ಸಿ ಜೋಲೊ ಸ್ಟೇ’ ಪೇಯಿಂಗ್ ಗೆಸ್ಟ್‌ ಕಟ್ಟಡದಲ್ಲಿ ಆರೋಪಿಗಳು ವಾಸವಿದ್ದರು. ಅದೇ ಕಟ್ಟಡದ ಟೆರಸ್‌ನಲ್ಲಿ ಪ್ಲಾಸ್ಟಿಕ್ ಪೈಪ್‌ಗೆ ರಾಷ್ಟ್ರಧ್ವಜ ಕಟ್ಟಿ ಅಗೌರವ ತೋರಿದ್ದರು’ ಎಂದು ಪೊಲೀಸರು ಹೇಳಿದರು.

‘ರಾಷ್ಟ್ರಧ್ವಜ ಗಮನಿಸಿದ್ದ ಗಸ್ತಿನಲ್ಲಿದ್ದ ಸಿಬ್ಬಂದಿ, ಪೇಯಿಂಗ್ ಗೆಸ್ಟ್ ಕಟ್ಟಡಕ್ಕೆ ಹೋಗಿ ವಿಚಾರಿಸಿದ್ದರು. ಯುವಕರಿಬ್ಬರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಿಸಿದಾಗ ತಪ್ಪೊಪ್ಪಿಕೊಂಡರು’ ಎಂದರು.

ಗರುಡಾ ಮಾಲ್‌ನಲ್ಲಿ ‘ಅವೆಂಜರ್ಸ್‌ ಎಂಡ್ ಗೇಮ್’ ಸಿನಿಮಾ ನೋಡಲು ಹೋಗಿ ರಾಷ್ಟ್ರಗೀತೆಗೆ ಅಗೌರವ ತೋರಿದ್ದ ಆರೋಪದಡಿ ಖಾಸಗಿ ಕಂಪನಿ ಉದ್ಯೋಗಿ ಜಿತಿನ್ ಎಂಬಾತನನ್ನು ಕೆಲ ದಿನಗಳ ಹಿಂದಷ್ಟೇ ಅಶೋಕನಗರ ಪೊಲೀಸರು ಬಂಧಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು