ಮತ್ತೆ ಪ್ರತ್ಯಕ್ಷವಾದವು ಫ್ಲೆಕ್ಸ್‌!

7

ಮತ್ತೆ ಪ್ರತ್ಯಕ್ಷವಾದವು ಫ್ಲೆಕ್ಸ್‌!

Published:
Updated:

ಬೆಂಗಳೂರು: ಹೈಕೋರ್ಟ್‌ ಛೀಮಾರಿ ಹಾಕಿದ ನಂತರವೂ ರಾಜರಾಜೇಶ್ವರಿ ನಗರ ವಾರ್ಡ್‌ನ ಪಾಲಿಕೆ ಸದಸ್ಯೆ ಎಂ.ನಳಿನಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಫ್ಲೆಕ್ಸ್‌ ಶನಿವಾರ ಹಾಕಲಾಗಿದೆ.

ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡಿರುವ ಬಿಬಿಎಂಪಿ ಅಧಿಕಾರಿಗಳು, ಫ್ಲೆಕ್ಸ್‌ ಅಳವಡಿಸಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷ ನಾರಾಯಣ್‌ ವಿರುದ್ಧ ದೂರು ದಾಖಲಿಸಿದ್ದಾರೆ.

ನಾಲ್ಕು ದಿನಗಳಿಂದ ನಡೆಯುತ್ತಿರುವ ಫ್ಲೆಕ್ಸ್‌ ತೆರವು ಕಾರ್ಯಾಚರಣೆ ಶನಿವಾರವೂ ಮುಂದುವರಿದಿದ್ದು, ಫ್ಲೆಕ್ಸ್ ಅಳವಡಿಕೆ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿಯೂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಪೂರ್ವ ವಲಯದಲ್ಲಿ 4,834 ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ, 11 ಎಫ್‌ಐಆರ್‌ಗಳನ್ನು ದಾಖಲಾಗಿದೆ. 21 ಫ್ಲೆಕ್ಸ್ ತಯಾರಿಕಾ ಮಳಿಗೆಗಳಿಗೆ ಬೀಗ ಜಡಿದಿದ್ದು, ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. 

ಬೊಮ್ಮನಹಳ್ಳಿ ವಲಯದಲ್ಲಿ 1,330 ಫ್ಲೆಕ್ಸ್‌ಗಳು ತೆರವು ಮಾಡಲಾಗಿದ್ದು, 6 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ದಕ್ಷಿಣ ವಲಯದಲ್ಲಿ 1,657 ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ 9 ಮಳಿಗೆಗಳನ್ನು ಮುಚ್ಚಿಸಿದ್ದಾರೆ. ಪಶ್ಚಿಮ ವಲಯದಲ್ಲಿ 1,442 ಫ್ಲೆಕ್ಸ್‌ಗಳನ್ನು ತೆರವು ಮಾಡಲಾಗಿದೆ. ಯಲಹಂಕ ವಲಯದಲ್ಲಿ 1,905 ಫ್ಲೆಕ್ಸ್ ತೆರವುಗೊಳಿಸಿ 10 ಮಳಿಗೆಗಳಿಗೆ ಬೀಗ ಹಾಕಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !