ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಎ.12 ರಿಂದ 19ರ ವರೆಗೆ ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಚಿಣ್ಣರಮೇಳ 2026 ರಾಜ್ಯಮಟ್ಟದ ಮಕ್ಕಳಬೇಸಿಗೆ ಶಿಬಿರ ಏರ್ಪಡಿಸಲಾಗಿದೆ.

ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4.30ರ ವರೆಗೆ ನಡೆಯಲಿರುವ ಈ ಶಿಬಿರವು ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕವಾದ ಹತ್ತು ಹಲವು ಚಟುವಟಿಕೆಗಳನ್ನು ಒಳಗೊಂಡಿರುತ್ತದೆ.

7 ರಿಂದ 15 ವರ್ಷ ವಯಸ್ಸಿನೊಳಗಿನ ಮಕ್ಕಳು ಭಾಗವಹಿಸಬಹುದು. ಊಟ, ಉಪಾಹಾರ ಹಾಗೂ ಅಗತ್ಯ ಇರುವ ಮಕ್ಕಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ರಂಗನಿರ್ದೇಶಕ ಜೀವನ್ ರಾಂ ಸುಳ್ಯ ನೇತೃತ್ವದಲ್ಲಿ ನಡೆಯುವ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನೀನಾಸಂ ಮತ್ತು ರಂಗಾಯಣದ ರಂಗ ಪದವೀಧರರು ಭಾಗವಹಿಸಲಿದ್ದಾರೆ.

ಆಸಕ್ತರು: 9448989382 (ವಿದುಷಿ ಸುಮನಾ ಪ್ರಸಾದ್), 9448215946 (ಜೀವನ್ ರಾಂ ಸುಳ್ಯ), 9108238937 (ಗೀತಾಕುಮಾರಿ ಸುಳ್ಯ) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-126-69807462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.