ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಆಲಡ್ಕ ಎಸ್.ಎಸ್.ಆಡಿಟೋರಿಯಂ ಸಭಾಂಗಣದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಬಂಟ್ವಾಳ ತಾಲ್ಲೂಕು ಬ್ಯಾರಿ ಸಾಹಿತ್ಯ ಪರಿಷತ್ತಿನ ವತಿಯಿಂದ ಮೇ 12ರಂದು ತಾಲ್ಲೂಕು ಮಟ್ಟದ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್. ಹೇಳಿದರು.

ಇಲ್ಲಿನ ಬಿ.ಸಿ.ರೋಡಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಪಾಣೆಮಂಗಳೂರು ಶಾರದಾ ಪ್ರೌಢಶಾಲಾ ಬಳಿಯಿಂದ ಹೊರಡುವ ಮೆರವಣಿಗೆಗೆ ಸ್ವಾಗತ ಸಮಿತಿ ಗೌರವ ಸಲಹೆಗಾರ ಪಿ.ಮುಹಮ್ಮದ್ ರಫೀಕ್ ಚಾಲನೆ ನೀಡುವರು ಎಂದರು.

10 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, 10.30ಕ್ಕೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಸಮ್ಮೇಳನ ಉದ್ಘಾಟಿಸುವರು. ಹಿರಿಯ ಕವಿ, ಗಾಯಕ ರಹೀಂ ಬಿ.ಸಿ.ರೋಡು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದು, ಶಾಸಕ ಯು.ರಾಜೇಶ್ ನಾಯ್ಕ್ ಉಳಿಪಾಡಿ ಅವರು ಉಮೈರತ್ ಕುಮೇರ್ ಅವರ ‘ಬೈಲ್ ಮಲೆ’ (ಬ್ಯಾರಿ ಕಥಾಸಂಕಲನ) ಕೃತಿ ಬಿಡುಗಡೆಗೊಳಿಸುವರು. ಪ್ರಮುಖರಾದ ಬಿ.ಎಚ್.ಖಾದರ್, ಎಂ.ಎಸ್.ಮಹಮ್ಮದ್, ಬಿ.ಅಬ್ದುಲ್ ಸಲಾಂ ತುಂಬೆ, ಡಾ.ಅಬ್ದುಲ್ ಬಶೀರ್ ವಿ.ಕೆ., ಸೆನೆಟ್ ಸದಸ್ಯ ಡಾ.ಮುಸ್ತಪಾ ಬಸ್ತಿಕೋಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಝ್, ಹಿರಿಯ ಸ್ಥಾನಿಕ ವೈದ್ಯೆ ಡಾ.ಹಸೀನಾ ಪೊನ್ನೋಡಿ ಭಾಗವಹಿಸುವರು ಎಂದು ಅವರು ತಿಳಿಸಿದರು.

ಮಧ್ಯಾಹ್ನ 12 ಗಂಟೆಗೆ ಚರ್ಚಾಗೋಷ್ಠಿ, 2 ಗಂಟೆಗೆ ಬ್ಯಾರಿ ಕವಿಗೋಷ್ಠಿ, ಸಂಜೆ 4 ಗಂಟೆಗೆ ಸಮಾರೋಪ ನಡೆಯಲಿದ್ದು, ಸಾಧಕರಿಗೆ ಸನ್ಮಾನ ನಡೆಯಲಿದೆ. ಮುಖಂಡರಾದ ಬಿ.ರಮಾನಾಥ ರೈ, ಜಿ.ಎ.ಬಾವಾ, ಡಾ.ಬಿ.ಎಂ.ಬೀರಾನ್ ಮೊಹಿದಿನ್, ಉಸ್ಮಾನ್ ಕರೋಪಾಡಿ, ಇಬ್ರಾಹಿಂ ಅಡ್ಕಸ್ಥಳ ಭಾಗವಹಿಸುವರು. ದಫ್, ಬ್ಯಾರಿ ಹಾಡುಗಳ ಸಂಭ್ರಮ ಮತ್ತು ‘ತೆರು ತಪ್ಪಿರ್’ ಬ್ಯಾರಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ವಿವರಿಸಿದರು.

ಸ್ವಾಗತ ಸಮಿತಿ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು, ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಅಕಾಡೆಮಿ ಸದಸ್ಯ ಅಬೂಬಕರ್ ಅನಿಲಕಟ್ಟೆ, ಉದ್ಯಮಿ ಹಂಝ ಬಸ್ತಿಕೋಡಿ, ಲತೀಫ್ ನೇರಳಕಟ್ಟೆ, ಪಿ.ಎಂ.ಅಶ್ರಫ್, ಮುಸ್ತಾಫ ಆಲಡ್ಕ, ಯೂಸುಫ್ ಕರಂದಾಡಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-29-1810630403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.