ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಮುಂಭಾಗದಲ್ಲಿ ‘ಬೆಂಗಳೂರಿನ ಆತ್ಮ’ ಹೆಸರಿನ ಭವ್ಯ ಕಲಾತ್ಮಕ ಶಿಲ್ಪವನ್ನು ಶನಿವಾರ ಅನಾವರಣಗೊಳಿಸಲಾಯಿತು.

ಬಯೊಕಾನ್ ಫೌಂಡೇಶನ್ ಹಾಗೂ ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಹಯೋಗದಲ್ಲಿ ಸ್ಥಾಪಿಸಲಾದ ಈ ಶಿಲ್ಪವನ್ನು ಸ್ಪೇನ್ನ ಖ್ಯಾತ ಕಲಾವಿದ ಜೌಮೆ ಪ್ಲೆನ್ಸಾ ರೂಪಿಸಿದ್ದಾರೆ.

ಭಾರತದಲ್ಲಿನ ಸ್ಪೇನ್ ರಾಯಭಾರಿ ಜುವಾನ್ ಆಂಟೋನಿಯೊ ಮಾರ್ಚ್ ಪೂಜೋಲ್ ಶಿಲ್ಪ ಅನಾವರಣಗೊಳಿಸಿದರು. ಸಚಿವ ಪ್ರಿಯಾಂಕ್ ಖರ್ಗೆ, ಉದ್ಯಮಿ ಕಿರಣ್ ಮಜುಂದಾರ್ ಶಾ ಹಾಗೂ ಬಿಐಎಎಲ್ ಸಿಇಒ ಹರಿ ಮರಾರ್ ಉಪಸ್ಥಿತರಿದ್ದರು.

ಸ್ಟೇನ್ಲೆಸ್ ಸ್ಟೀಲ್ನಿಂದ ನಿರ್ಮಿತ ಈ ಶಿಲ್ಪವು ಬೆಂಗಳೂರಿನ ವೈವಿಧ್ಯಮಯ ಸಂಸ್ಕೃತಿ ಮತ್ತು ನವೀನತೆ ಪ್ರತಿಬಿಂಬಿಸತ್ತದೆ. ಟರ್ಮಿನಲ್-2 ಅನ್ನು ಸಾಂಸ್ಕೃತಿಕ ಹೆಬ್ಬಾಗಿಲಾಗಿ ರೂಪಿಸುವ ಬಿಐಎಎಲ್ ಪ್ರಯತ್ನಕ್ಕೆ ಇದು ಮತ್ತಷ್ಟು ಮೆರುಗು ನೀಡಿದೆ.

ಸ್ಕೈಟ್ರ್ಯಾಕ್ಸ್ 2026ರ ‘ವಿಶ್ವದ ಅತ್ಯುತ್ತಮ ಕಲಾ ವಿಮಾನ ನಿಲ್ದಾಣ’ ಪಟ್ಟಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಸ್ಥಾನ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-15-1529446441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.