ಮಂಗಳೂರು: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಮಾ.26ರಿಂದ 28ರವರೆಗೆ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಮಥನದ ಜೊತೆಗೆ ಕರಾವಳಿಯ ಸಾಂಪ್ರದಾಯಿಕ ವಿಶೇಷಗಳು ಅನಾವರಣಗೊಳ್ಳಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಶ್ರೀನಾಥ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪತ್ರಕರ್ತ ಚಿದಂಬರ ಬೈಕಂಪಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನದಲ್ಲಿ ಪಟ್ಟಾಂಗ ಕಟ್ಟೆಯಲ್ಲಿ ಅಜ್ಜಿಕಥೆ, ಉತ್ತರ ಹೇಳಿ ಪುಸ್ತಕ ಗೆಲ್ಲಿ ಹಾಗೂ ಗ್ರಾಮೀಣ ಪ್ರತಿಭೆಗಳ ನೃತ್ಯ ಪ್ರದರ್ಶನ, 30ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು, ಗುಡಿ ಕೈಗಾರಿಕೆ, ಕರಕುಶಲ, ಕೈಮಗ್ಗ, ಕರಾವಳಿಯ ವಿಶೇಷ ತಿನಿಸುಗಳು ಪ್ರದರ್ಶನಗೊಳ್ಳಲಿವೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಭಾಷಾ ಸಾಮರಸ್ಯ, ಜಿಲ್ಲೆಯ ಸಾಹಿತ್ಯ ಸಂಸ್ಕೃತಿ, ವಾಚನ– ಗಾಯನ– ಕುಂಚ, ಸಾಹಿತ್ಯ: ಹೊಸ ತಲೆಮಾರು ಕುರಿತ ಗೋಷ್ಠಿಗಳು, ಆರು ವಿಶೇಷ ಉಪನ್ಯಾಸಗಳು, ಗಮಕ, ನೃತ್ಯ, ಯಕ್ಷಗಾನ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಾಹಿತ್ಯ, ಕಲೆ, ಸಂಸ್ಕೃತಿ, ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ, ಸಾಧಕ ಸಿರಿ ಪ್ರಶಸ್ತಿ, ಕನ್ನಡ ಸಿರಿ ಪ್ರಶಸ್ತಿ ಪ್ರದಾನ ಇವು ಈ ಬಾರಿಯ ಮೂರು ದಿನಗಳ ಸಮ್ಮೇಳನದ ವಿಶೇಷಗಳಾಗಿವೆ ಎಂದು ವಿವರಿಸಿದರು.

ಮಾ.26ರಂದು ಸಂಜೆ 4 ಗಂಟೆಗೆ ಬಿ.ಸಿ.ರೋಡ್ನ ಪೊಳಲಿ ದ್ವಾರದಿಂದ ಸಮ್ಮೇಳನದ ಸಭಾಂಗಣದವರೆಗೆ ಕನ್ನಡ ಸಾಂಸ್ಕೃತಿಕ ದಿಬ್ಬಣ ನಡೆಯಲಿದೆ. ಸಂಜೆ 6 ಗಂಟೆಗೆ ‘ಮೂರು ಮುತ್ತು’ ಹಾಸ್ಯ ನಾಟಕ, ಮಾ.27ರಂದು ಬೆಳಿಗ್ಗೆ 9.45ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಮ್ಮೇಳನ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುವರು. ನಂತರ ಗೋಷ್ಠಿಗಳು ನಡೆಯಲಿವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮ್ಮೇಳನ ಸಂಘಟಕರಾದ ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ವಿಶ್ವನಾಥ ಬಂಟ್ವಾಳ, ವಿನಯ ಆಚಾರ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-1558461961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.