ಗುಳೇದಗುಡ್ಡ: ಆರ್ಎಸ್ಎಸ್ ಹಿರಿಯ ಕಾರ್ಯಕರ್ತ ರಂಗಪ್ಪ ಶೇಬಿನಕಟ್ಟಿ ಅವರು 84 ವರ್ಷ ಪೂರೈಸಿದ ನಿಮಿತ್ತರಂಗಪ್ಪ ಶೇಬಿನಕಟ್ಟಿ ಅವರಿಗೆ ಅಭಿನಂದನಾ ಸಮಾರಂಭ, ಸಹಸ್ರ ಚಂದದರ್ಶನ ಕಾರ್ಯಕ್ರಮ, ಗ್ರಂಥಗಳ ಬಿಡುಗಡೆ ಸಮಾರಂಭ ಮೇ 5ರಂದು ಕರನಂದಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ರಾಜಶೇಖರ ಶೀಲವಂತ ತಿಳಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿ, ರಂಗಪ್ಪ ಶೇಬಿನಕಟ್ಟಿಯವರು ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಸಂಘ ಕಟ್ಟಿಕೊಂಡು ಸಾಮಾಜಿಕ ಸೇವೆ ಸಲ್ಲಿಸಿದ್ದಾರೆ. ಧರ್ಮ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ, ಅವರ ಸೇವೆ ಸ್ಮರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಭಿನಂದನಾ ಸಮಿತಿಯ ‘ನೋವುಂಡು ನಲಿದವರು’, ವಿ.ಎ.ಬೆನಕನಾಳ ಅವರ ‘ರಾಷ್ಟ್ರ ನೇತಾರ ಅಟಲ್ ಬಿಹಾರಿ ವಾಜಪೇಯಿ’, ಎಸ್.ವಿ.ಚವಡಾಪುರ ಅವರು ಆಂಗ್ಲ ಆವೃತ್ತಿಯಲ್ಲಿ ರಚಿಸಿದ ‘ದೇವರ ದಾಸಿಮಯ್ಯನವರ ಆಯ್ದ 50 ವಚನಗಳು’ ಪುಸ್ತಕಗಳು ಬಿಡುಗಡೆಗೊಳ್ಳಲಿವೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-19-193853318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.