ಹಾಸನ: ರಂಗಾಯಣ ವತಿಯಿಂದ ಬೊಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿ ಆಧಾರಿತ ‘ಸ್ವಾತಂತ್ರ್ಯದ ಓಟ’ ನಾಟಕವನ್ನು ಮೇ 31ರಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ರಂಗಾಯಣದ ಚಿನ್ನೇನಹಳ್ಳಿ ಸ್ವಾಮಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಸಂಜೆ 5.30ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ. ಜಿಲ್ಲೆಯ ನಾಟಕಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ನಾಟಕಕ್ಕೆ ನಟರಾಜ್ ಹೊನ್ನವಳ್ಳಿ ರಂಗಪಠ್ಯ, ವಿನ್ಯಾಸ ಹಾಗೂ ನಿರ್ದೇಶನ ನೀಡಿದ್ದಾರೆ. ಮಂಜುನಾಥ್ ಗೋಮಾರದಹಳ್ಳಿ ನಾಟಕ ರೂಪಾಂತರ ಮಾಡಿದ್ದಾರೆ. ಸಲ್ಮಾ ದಂಡಿನ್ ಸಹ ನಿರ್ದೇಶನ, ರಾಘವ ಕಮ್ಮಾರ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಅವರು ವಿವರಿಸಿದರು.

ಮಧುಸೂದನ್, ರಮೇಶ್ ಎಸ್. ಮೈಸೂರು ಹಾಗೂ ಶಂಕರ್ ಕೆ. ಬೆಳಲಕಟ್ಟೆ ರಂಗಸಜ್ಜಿಕೆ ನಿರ್ಮಾಣದ ಜವಾಬ್ದಾರಿ ನಿರ್ವಹಿಸಿದ್ದಾರೆ. ಮಂಜು ನಾರಾಯಣ್ ಬೆಳಕು ವಿನ್ಯಾಸ ಮತ್ತು ಸಹನಾ ಪಿಂಜರ್ ವಸ್ತ್ರ ವಿನ್ಯಾಸ ಮಾಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಲಂ ಹಾಡ್ಲಹಳ್ಳಿ, ಪೂಜಾ, ಶಾಡ್ರಾಕ್, ರಘುನಂದನ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-36-1956938860

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.