ರಾಣೆಬೆನ್ನೂರು: ‘ಸೃಷ್ಟಿಕ್ರಿಯೆ ಎನ್ನುವುದು ಕಾವ್ಯದ ಮೂಲಗುಣ. ಸಿಟ್ಟು, ಆಕ್ರೋಶ, ನೋವು, ನಲಿವು ಉಂಟಾದಾಗ ಕಾವ್ಯ ಹುಟ್ಟಿಕೊಳ್ಳುತ್ತದೆ. ಲೋಕದ ಸಂಕಟ, ತಲ್ಲಣ, ಅನುಭವಗಳನ್ನು ಕಾವ್ಯಮಯವಾಗಿಸುವವನೇ ಕವಿ’ ಎಂದು ಶಿಗ್ಗಾವಿಯ ಸಾಹಿತಿ ಶಕುಂತಲಾ ಹೇಳಿದರು.

ಇಲ್ಲಿನ ಮೇಡ್ಲೇರಿ ರಸ್ತೆಯ ವಾಗೀಶನಗರದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಸಭಾ ಭವನದಲ್ಲಿ ಭಾನುವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾವೇರಿ ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆ, ಕಸಾಪ ತಾಲ್ಲೂಕು ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕವಿ ಅಂತರಂಗದಲ್ಲಿ ತನ್ನೊಳಗೆ ತಾನೇ ಜಗಳ ಮಾಡಿಕೊಂಡರೆ ಕವಿತೆ ಹುಟ್ಟುತ್ತದೆ. ಸುಮ್ಮನೆ ಬರೆದ ಸಾಲುಗಳು ಕವಿತೆಯಾಗಲಾರವು. ಕವಿತೆ ಬರೆಯುವುದು ಒಂದು ಕಲೆ. ಬರೆದ ಕವಿತೆಯನ್ನು ವಾಚನ ಮಾಡುವ ಮೂಲಕ ಕೇಳುವರಿಗೆ ಮುಟ್ಟಿಸುವುದೂ ಒಂದು ಕಲೆ. ಇಂಥ ಸಾಮರ್ಥ್ಯವನ್ನು ಮೈಗೂಡಿಸಿಕೊಳ್ಳಬೇಕು. ಜಿಲ್ಲೆಯ ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿರುವುದು ಸಂತೋಷಕರ ಸಂಗತಿ’ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡಮಿಯ ಸದಸ್ಯ ಸಂಚಾಲಕ ಮಲ್ಲಿಕಾರ್ಜುನ ಬಿ. ಮಾನ್ಪಡೆ ಅವರು ಮಾತನಾಡಿ, ‘ಸಾಹಿತ್ಯವು ಸಮಾಜದ ಮನಸ್ಸಿನ ಪ್ರತಿಬಿಂಬವಾಗಿದ್ದು, ಕವಿತೆ ಮಾನವನ ಭಾವನೆಗಳನ್ನು ಸೂಕ್ಷ್ಮವಾಗಿ ಅಭಿವ್ಯಕ್ತಿಸುವ ಶಕ್ತಿಯಾಗಿದೆ. ಕವಿಗಳು ತಮ್ಮ ಸೃಜನಶೀಲತೆಯ ಮೂಲಕ ಸಮಾಜದ ಸಮಸ್ಯೆ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಸಾಹಿತ್ಯವು ಕೇವಲ ಮನರಂಜನೆಗೆ ಸೀಮಿತವಾಗದೇ, ಸಮಾಜ ಪರಿವರ್ತನೆಗೆ ದಾರಿದೀಪವಾಗಬೇಕು’ ಎಂದು ಹೇಳಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ 25ಕ್ಕೂ ಹೆಚ್ಚು ಯುವ ಕವಿಗಳು ಕವನ ಓದಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕ ಮಾರುತಿ ತಳವಾರ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರವೀಂದ್ರ ಗೌಡ ಪಾಟೀಲ, ಅಂಬೇಡ್ಕರ್ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಧರ್ ಚಲವಾದಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ಶಿಗ್ಲಿ, ಶಿವಕುಮಾರ ಚನ್ನಪ್ಪನವರ ಶೇಖರ ಭಜಂತ್ರಿ, ದ್ರಾಕ್ಷಾಯಿಣಿ ಉದಗಟ್ಟಿ, ರೇಖಾ ರಮಾಳದ, ವಿನಾಯಕ ಬಾರ್ಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-22-1450594753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.