ಕನಕಪುರ: ತಾಲ್ಲೂಕಿನ ಕಸಬಾ ಹೋಬಳಿ ಟಿ.ಬೇಕುಪ್ಪೆ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈನುಗಾರರು, ರೈತರು ಬಮುಲ್ ಶಿಬಿರ ವ್ಯವಸ್ಥಾಪಕರಿಗೆ ದೂರು ನೀಡಿದ್ದಾರೆ.

ಡೇರಿಗೆ ಹಾಲು ಸರಬರಾಜು ಮಾಡಿದ್ದಕ್ಕಾಗಿ ಮಗಳ ಬ್ಯಾಂಕ್ ಖಾತೆಗೆ ₹3.84 ಲಕ್ಷವನ್ನು ಶಂಭುಲಿಂಗೇಗೌಡ ವರ್ಗಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ಬಮುಲ್ ಶಿಬಿರ ಕಚೇರಿಯ ವ್ಯವಸ್ಥಾಪಕ ಪ್ರಕಾಶ್ ಶುಕ್ರವಾರ ಟಿ.ಬೇಕುಪ್ಪೆ ಡೇರಿ ಕಚೇರಿಗೆ ಭೇಟಿ ನೀಡಿದ್ದರು.

ಹಾಲು ಉತ್ಪಾದಕ ರೈತರು ಹೈನುಗಾರರು ಹಣ ದುರ್ಬಳಕೆ ಕುರಿತು ಪ್ರಕಾಶ್ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

‘ದಾಖಲೆ ಸಮೇತ ಶಿಬಿರ ಕಚೇರಿಯ ವ್ಯವಸ್ಥಾಪಕರಿಗೆ ನಾವು ದೂರು ನೀಡಿದ್ದೇವೆ. ಆದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಅಕ್ರಮ ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ವೇಳೆ ಕಾನೂನಾತ್ಮಕ ಕ್ರಮ ಆಗದಿದ್ದರೆ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರಿಗೆ ದೂರು ನೀಡುತ್ತೇವೆ’ ಎಂದು ರೈತರು ತಿಳಿಸಿದರು. ಗ್ರಾಮದ ರೈತರಾದ ಮಧು, ಶಿವಕುಮಾರ್, ರಾಜಶೇಖರ್, ನವೀನ್, ವರುಣ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-1949099239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.